Publish Date: Fri, 18 Jun 2021 (09:35 IST)
Updated Date: Fri, 18 Jun 2021 (09:37 IST)
ಬೆಳಗಾವಿ: ರಾಸಲೀಲೆ ವಿಡಿಯೋದಿಂದಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿಗೆ ಮತ್ತೆ ಸಚಿವ ಸ್ಥಾನ ನೀಡಿ ಎಂದು ಅವರ ಅಭಿಮಾನಿಗಳು ಒಂಟೆ ಮೇಲೆ ಮೆರವಣಿಗೆ ಮಾಡಿದ್ದಾರೆ.
ಬೆಳಗಾವಿಯ ಚೆನ್ನಮ್ಮ ವೃತ್ತದ ಬಳಿ ರಮೇಶ್ ಜಾರಕಿಹೊಳಿ ಬೆಂಬಲಿಗರು, ಹಿತೈಷಿಗಳು ಒಂಟೆ ಮೆರವಣಿಗೆ ಮಾಡಿ ತಮ್ಮ ಬೇಡಿಕೆ ಮಂಡಿಸಿದ್ದಾರೆ.
ರಮೇಶ್ ಜಾರಕಿಹೊಳಿಯವರನ್ನು ರಾಜಕೀಯವಾಗಿ ಮುಗಿಸಲು ಷಡ್ಯಂತ್ರ ಮಾಡಲಾಗಿದೆ. ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಮಾಡುವ ಮೂಲಕ ಮನೆ ಮಾತಾಗಿದ್ದ ರಮೇಶ್ ಜಾರಕಿಹೊಳಿಯವರಿಗೆ ಮತ್ತೆ ಸಚಿವ ಸ್ಥಾನ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.