Publish Date: Wed, 03 Mar 2021 (08:55 IST)
Updated Date: Wed, 03 Mar 2021 (08:58 IST)
ಬೆಂಗಳೂರು: ಯುವತಿಯೊಬ್ಬಳಿಗೆ ಕೆಲಸ ಕೊಡಿಸುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯವೆಸಗಿದ್ದಾರೆಂಬ ಆರೋಪಕ್ಕೊಳಗಾಗಿರುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಈಗ ನಾಪತ್ತೆಯಾಗಿದ್ದಾರೆ.
ವಿವಾದದ ಬಳಿಕ ಸಚಿವರು ಸಾರ್ವಜನಿಕವಾಗಿ ಎಲ್ಲಿಯೂ ಕಾಣಿಸಿಕೊಂಡಿಲ್ಲ. ಈ ನಡುವೆ ರಾಸಲೀಲೆಯ ವಿಡಿಯೋ ಬಹಿರಂಗವಾಗುತ್ತಿದ್ದಂತೇ ಅವರ ರಾಜೀನಾಮೆಗೆ ಒತ್ತಾಯ ಕೇಳಿಬರುತ್ತಿದೆ. ಮೂಲಗಳ ಪ್ರಕಾರ ಅವರು ಇಂದೇ ಸಿಎಂ ಭೇಟಿಯಾಗಿ ರಾಜೀನಾಮೆ ಸಲ್ಲಿಸುವ ಸಾಧ‍್ಯತೆಯೂ ಇದೆ.
ಸಚಿವರ ರಾಸಲೀಲೆ ವಿಡಿಯೋ ಬಹಿರಂಗವಾದ ಬಗ್ಗೆ ಹೈಕಮಾಂಡ್ ಗೂ ವರದಿ ಸಲ್ಲಿಸುವುದಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ. ಹೀಗಾಗಿ ಅವರು ರಾಜೀನಾಮೆ ಕೊಡಬೇಕಾದ ಅನಿವಾರ್ಯತೆ ಎದುರಾಗಬಹುದು.
ಇನ್ನು, ಸಂತ್ರಸ್ತೆ ಮತ್ತು ಕುಟುಂಬಸ್ಥರ ಹೇಳಿಕೆ ದಾಖಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್. ಅನುಚೇತ್ ಹೇಳಿದ್ದಾರೆ.