Publish Date: Wed, 03 Mar 2021 (13:14 IST)
Updated Date: Wed, 03 Mar 2021 (13:16 IST)
ಬೆಂಗಳೂರು: ರಾಸಲೀಲೆ ವಿಡಿಯೋದಿಂದಾಗಿ ವಿವಾದಕ್ಕೀಡಾಗಿರುವ ಜಲಸಂಪನ್ಮೂಲ ಖಾತೆ ಸಚಿವ ರಮೇಶ್ ಜಾರಕಿಹೊಳಿ ಕೊನೆಗೂ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ವಿಡಿಯೋ ಬಹಿರಂಗವಾದ ಬಳಿಕ ರಮೇಶ್ ಜಾರಕಿಹೊಳಿ ರಾಜೀನಾಮೆ ಕೊಡಬೇಕೆಂದು ವಿಪಕ್ಷಗಳು ತೀವ್ರ ಒತ್ತಾಯ ಹೇರಿದ್ದವು. ಇದೀಗ ಕೊನೆಗೂ ಪಕ್ಷಕ್ಕೆ ಮುಜುಗರವಾಗಬಾರದು ಎಂಬ ದೃಷ್ಟಿಯಿಂದ ರಾಜೀನಾಮೆ ನೀಡುತ್ತಿರುವುದಾಗಿ ಅವರು ಹೇಳಿದ್ದಾರೆ.
5 ರಾಜ್ಯಗಳ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ವಿಪಕ್ಷಗಳಿಗೆ ಬಿಜೆಪಿ ವಿರುದ್ಧ ಇದು ಅಸ್ತ್ರವಾಗಬಾರದು. ತಮ್ಮಿಂದಾಗಿ ಪಕ್ಷಕ್ಕೆ ಮುಜುಗರವಾಗುವುದು ಬೇಡ. ದೋಷಮುಕ್ತನಾಗಿ ಬಂದ ಬಳಿಕ ಸಚಿವ ಸ್ಥಾನ ಕೊಡಿ ಎಂದು ಸಿಎಂ ಯಡಿಯೂರಪ್ಪಗೆ ರಾಜೀನಾಮೆ ಪತ್ರದಲ್ಲಿ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.