Select Your Language

Notifications

webdunia
webdunia
webdunia
webdunia

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

Basanagowda Patil Yatnal

Krishnaveni K

ಬೆಂಗಳೂರು , ಶನಿವಾರ, 28 ಜೂನ್ 2025 (16:21 IST)
ಬೆಂಗಳೂರು: ಈ ಹಿಂದೆ ರಾಜಕೀಯದಲ್ಲಿ ಭಾರೀ ಸದ್ದು ಮಾಡಿದ್ದ ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ಹೊರ ತಂದಿದ್ದು ಯಾರು ಎಂದು ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೊಮ್ಮೆ ಹೇಳಿದ್ದಾರೆ.

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ಟೀಂ ಎಂದು ಯತ್ನಾಳ್ ಮತ್ತೊಮ್ಮೆ ಆರೋಪಿಸಿದ್ದಾರೆ. ಈ ಹಿಂದೆಯೂ ಒಮ್ಮೆ ವಿಜಯೇಂದ್ರ ಬಗ್ಗೆ ಯತ್ನಾಳ್ ಇಂತಹದ್ದೇ ಗಂಭೀರ ಆರೋಪ ಮಾಡಿದ್ದರು.

ಯಡಿಯೂರಪ್ಪ ತಮ್ಮ ಮಗನನ್ನು ಅಧ್ಯಕ್ಷ ಮಾಡಿಸುವ ಸಲುವಾಗಿ ನನ್ನನ್ನು ಉಚ್ಚಾಟನೆ ಮಾಡಿಸಿದರು. ಯಡಿಯೂರಪ್ಪ ಮತ್ತು ವಿಜಯೇಂದ್ರ ಮೇಲೆ ಹಲವು ಕೇಸ್ ಇದೆ. ವಿಜಯೇಂದ್ರ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಬಿಜೆಪಿಯಲ್ಲಿ ವಿಜಯೇಂದ್ರ ವಿರುದ್ಧ ಈಗ ಟೀಂ ದೊಡ್ಡದಾಗಿದೆ. ಅತೃಪ್ತರು ಮತ್ತೆ ಸಭೆ ಸೇರಲಿದ್ದೇವೆ. ತಟಸ್ಥರೂ ವಿಜಯೇಂದ್ರ ವಿರುದ್ಧ ಇದ್ದಾರೆ. ಹೀಗಾಗಿ ಅವರು ಅಧಿಕಾರದಿಂದ ಕೆಳಗಿಳಿಯಬೇಕು ಎಂದು ಯತ್ನಾಳ್ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್