Select Your Language

Notifications

webdunia
webdunia
webdunia
webdunia

ರಮೇಶ್ ಜಾರಕಿಹೊಳಿ ಮತ್ತೆ ಸಚಿವರಾಗುತ್ತಾರೆ

ನಾರಾಯಣ ಗೌಡ

ರಮೇಶ್ ಜಾರಕಿಹೊಳಿ ಮತ್ತೆ ಸಚಿವರಾಗುತ್ತಾರೆ
bangalore , ಬುಧವಾರ, 30 ಜೂನ್ 2021 (16:05 IST)
ರಮೇಶ್ ಜಾರಕಿಹೊಳಿ ಮತ್ತೆ ಮಂತ್ರಿ ಆಗ್ತಾರೆ, ಅವರ ಪ್ರಕರಣ ಆದಷ್ಟು ಬೇಗ ಕ್ಲಿಯರ್ ಆಗುತ್ತೆ ಅಂತ ಸಚಿವ ನಾರಾಯಣಗೌಡ ಭರವಸೆ ವ್ಯಕ್ತಪಡಿಸಿದ್ದಾರೆ.
ರಾಮನಗರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಅವರ ಬಗ್ಗೆ ನಮಗೆ ಗೌರವ ಇದೆ. ನಾವೆಲ್ಲರೂ ಜೊತೆಗಿದ್ದವರು ಎಂದರು.
ಕಾಂಗ್ರೆಸ್ ಪಕ್ಷದವರು ಸಿಎಂ ವಿಚಾರದಲ್ಲಿ ಹಗಲು ಕನಸು ಕಾಣುತ್ತಿದ್ದಾರೆ, ಚುನಾವಣೆಗೆ ಇನ್ನು 2 ವರ್ಷ ಬಾಕಿಯಿದೆ, ಆದರೆ ಈಗಲೇ ಅವರು ಸಿಎಂ ಕುರ್ಚಿಯ ಕನಸು ಕಾಣುತ್ತಿದ್ದಾರೆ ಎಂದು ಅವರು ಹೇಳಿದರು.
 
ರಾಜ್ಯದಲ್ಲಿ ಯಾವುದೇ ನಾಯಕತ್ವ ಬದಲಾವಣೆಯಿಲ್ಲ, 2 ವರ್ಷಗಳ ಕಾಲ ಯಡಿಯೂರಪ್ಪ ನವರೇ ಸಿಎಂ ಆಗಿ ಮುಂದುವರೆಯುತ್ತಾರೆ, ಅದರಲ್ಲಿ ಯಾವುದೇ ಬದಲಾವಣೆ ಇಲ್ಲ, ಮುಂದಿನ ಬಾರಿಯೂ 150 ಸೀಟ್ ಗೆಲ್ತೇವೆ, ಬಿಜೆಪಿ ಪಕ್ಷ ಅಧಿಕಾರಕ್ಕೆ ಬರುತ್ತೆ ಎಂದು ಅವರು ಆತ್ಮವಿಶ್ವಾಸ ವ್ಯಕ್ತಪಡಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಸಚಿವರ ಖಾತೆ ಲಾಕ್ ಮಾಡಿದ ಟ್ವಿಟರ್ ಗೆ ನೋಟಿಸ್