ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರ್ತಾರಾ? ಹೊಸ ಬಾಂಬ್ ಸಿಡಿಸಿದ ಕೋಟಾ ಶ್ರೀನಿವಾಸ ಪೂಜಾರಿ

ಬುಧವಾರ, 5 ಡಿಸೆಂಬರ್ 2018 (11:39 IST)
ಬೆಳಗಾವಿ : ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಸಿಡಿಸಿದ  ಹೊಸ ಬಾಂಬ್ ವೊಂದರಿಂದ ಸಚಿವ ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರ್ತಾರಾ? ಎಂಬ ಅನುಮಾನ ಇದೀಗ ವ್ಯಕ್ತವಾಗಿದೆ.

ಹೌದು. ಮಾಧ್ಯಮದವರೊಂದಿದಗೆ ಮಾತನಾಡಿದ  ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಅವರು, ‘ಸಚಿವ ರಮೇಶ್ ಜಾರಕಿಹೊಳಿ ಮಾನಸಿಕವಾಗಿ ಸರ್ಕಾರದಿಂದ ದೂರವಾಗಿದ್ದಾರೆ. ಆದರೆ ಅವರು ಬಿಜೆಪಿಗೆ ಬರ್ತಾರೆ ಅಂತಾ ನಾನು ಖಚಿತವಾಗಿ ಹೇಳುವುದಿಲ್ಲ. ಆದರೆ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಪಕ್ಷಕ್ಕೆ ಬರಬಹುದು ಎಂಬ ನಿರೀಕ್ಷೆ ಇದೆ’ ಎಂದು ಹೇಳಿದ್ದಾರೆ.

 

ಹಾಗೇ  ‘ಸಮ್ಮಿಶ್ರ ಸರ್ಕಾರ ಟೆಕಾ‍‍ಫ್ ಆಗಿಲ್ಲ. ಕೆಲವರು ಜಿಲ್ಲೆಗೆ ಮಂತ್ರಿ ಕೆಲವರು ಕ್ಷೇತ್ರಕ್ಕೆ ಮಂತ್ರಿ ಆಗಿದ್ದಾರೆ. ಮಂತ್ರಿಗಳು, ಸಿಎಂ ಯಾವುದೇ ಕೆಲಸ ಮಾಡುತ್ತಿಲ್ಲ’ ಎಂದು ಕೂಡ ಸರ್ಕಾರದ ವಿರುದ್ಧ ಕೋಟಾ ಶ್ರೀನಿವಾಸ ಪೂಜಾರಿ ವಾಗ್ದಾಳಿ ನಡೆಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ವಾಹನಸವಾರರಿಗೊಂದು ಶಾಕಿಂಗ್ ನ್ಯೂಸ್. ಸದ್ಯದಲ್ಲೇ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಸಾಧ್ಯತೆ