ಅತೃಪ್ತ ಶಾಸಕರಿಗೆ ಬಿಗ್ ಶಾಕ್ ನೀಡಿದ ಸ್ಪೀಕರ್ ರಮೇಶ್ ಕುಮಾರ್

ಸೋಮವಾರ, 22 ಜುಲೈ 2019 (10:27 IST)
ಬೆಂಗಳೂರು : ಮೈತ್ರಿ ಸರ್ಕಾರವನ್ನು ಉರುಳಿಸಲೇಬೇಕೆಂದು ಪಣತೊಟ್ಟು ಕ್ಷೇತ್ರಬಿಟ್ಟು ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ ಅತೃಪ್ತ ಶಾಸಕರಿಗೆ ಸ್ಪೀಕರ್ ರಮೇಶ್ ಕುಮಾರ್ ಬಿಗ್ ಶಾಕ್ ನೀಡಿದ್ದಾರೆ.
12 ಮಂದಿ ಅತೃಪ್ತ ಶಾಸಕರಿಗೆ ಪಕ್ಷಾಂತರ ನಿಷೇಧ ದೂರಿನ ಅರ್ಜಿ ಹಿನ್ನೆಲೆಯಲ್ಲಿ ನಿಮ್ಮನ್ನ ಅನರ್ಹಗೊಳಿಸಬಾರದು ಎಂಬುದಕ್ಕೆ ಸರಿಯಾದ ವಿವರಣೆ ನೀಡಿ ಎಂದು ಸ್ಪೀಕರ್ ರಮೇಶ್ ಅತೃಪ್ರ ಶಾಸಕರಿಗೆ  ನೋಟಿಸ್ ನೀಡಿದ್ದಾರೆ ಎನ್ನಲಾಗಿದೆ.
ಒಂದು ವೇಳೆ ಪಕ್ಷಾಂತರ ನಿಷೇಧ ಕಾಯ್ದೆಯ ಅಡಿ ಅನರ್ಹತೆಗೊಳಿಸಿದರೂ ಈ ಶಾಸಕರು ಸ್ಪೀಕರ್ ಆದೇಶವನ್ನು ಪ್ರಶ್ನಿಸಿ  ಸುಪ್ರೀಂ ಕೋರ್ಟ್ ಮೊರೆ ಹೋಗುವ ಸಾಧ್ಯತೆ ಇದೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಸಿಎಂ ಕುಮಾರಸ್ವಾಮಿ ವಿಶ್ವಾಸಮತಯಾಚನೆ ಹಿನ್ನಲೆ; ವಿಧಾನಸೌಧದ 2ಕೀ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ