Publish Date: Mon, 04 Nov 2019 (11:26 IST)
Updated Date: Mon, 04 Nov 2019 (11:29 IST)
ಬೆಂಗಳೂರು : ಅನರ್ಹ ಶಾಸಕರು ರಾಜೀನಾಮೆ ಕೊಡಲು ಸಿದ್ದರಾಮಯ್ಯ ನವರೇ ಕಾರಣ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಆರೋಪಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ರಮೇಶ್ ಕುಮಾರ್ ಸಿದ್ದರಾಮಯ್ಯ ಷಡ್ಯಂತ್ರ ಮಾಡಿ ಶಾಸಕರನ್ನ ಅನರ್ಹಗೊಳಿಸಿದ್ದಾರೆಂದು ಕಿಡಿಕಾರಿದ್ದಾರೆ.
ಸುಪ್ರೀಂಕೋರ್ಟ್ ಹಾಗೂ ಜನರಲ್ಲಿ ಗೊಂದಲ ಮೂಡಿಸುವುದು ಸರಿಯಲ್ಲ. ಚುನಾವಣೆಯಲ್ಲಿ ನೀವು ಸೋಲುವುದು ಖಚಿತ. ನಿಮಗೆ ತಾಕತ್ತಿದ್ದರೆ ಚುನಾವಣೆ ಎದುರಿಸಿ ಎಂದು ಯಡಿಯೂರಪ್ಪ ಅವರು ಸಿದ್ದರಾಮಯ್ಯನವರಿಗೆ ಸವಾಲು ಹಾಕಿದ್ದಾರೆ.