Select Your Language

Notifications

webdunia
webdunia
webdunia
webdunia

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ; ಕುಮಾರಸ್ವಾಮಿ ಹೇಳಿದ್ದೇನು?

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ; ಕುಮಾರಸ್ವಾಮಿ ಹೇಳಿದ್ದೇನು?
ಮೈಸೂರು , ಗುರುವಾರ, 11 ಮಾರ್ಚ್ 2021 (13:00 IST)
ಮೈಸೂರು : ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣ ಇದರ  ತನಿಖೆ ಎಸ್ ಐಟಿಗೆ ನೀಡಿದ್ದು ತಿಪ್ಪೆ ಸಾರಿಸುವ ಕೆಲಸವಷ್ಟೇ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಬಗ್ಗೆ ತನಿಖೆ ನಡೆಸುವಂತೆ ರಮೇಶ್ ಜಾರಕಿಹೊಳಿ ಸರ್ಕಾರಕ್ಕೆ ಮನವಿ ಮಾಡಿದ ಹಿನ್ನಲೆಯಲ್ಲಿ ಈ ಪ್ರಕರಣವನ್ನು ಎಸ್ ಐಟಿ ತನಿಖೆಗೆ ನೀಡಲಾಗಿದೆ.

ಮೈಸೂರಿನಲ್ಲಿ ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ  ಕುಮಾರಸ್ವಾಮಿ, ಎಸ್ ಐಟಿ ತನಿಖೆಯಿಂದ ಯಾವುದೇ ಪ್ರಯೋಜನವಿಲ್ಲ. ಎಸ್ ಐಟಿ ತನಿಖೆಯಿಂದ ಈವರೆಗೆ ಯಾರೂ ಜೈಲಿಗೆ ಹೋಗಿಲ್ಲ. ರಾಜಕಾರಣದಲ್ಲಿ ನೇರವಾಗಿ ಯುದ್ಧ ಮಾಡೋಣ ಎಂದು ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಉತ್ತರ ಕರ್ನಾಟಕ ನಾಯಕರ ವಿರುದ್ಧ ಪಾಟೀಲ್ ನಡವಳ್ಳಿ ಗರಂ