ಗೋಕಾಕ್ ಪ್ರತ್ಯೇಕ ಜಿಲ್ಲೆಯಾಗಬೇಕೆಂದ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ

Webdunia
ಮಂಗಳವಾರ, 15 ಅಕ್ಟೋಬರ್ 2019 (11:59 IST)
ಬೆಳಗಾವಿ : ಬಳ್ಳಾರಿ, ಮೈಸೂರಿನ ವಿಭಜನೆಯಾಗಬೇಕೆಂಬ ಕೂಗಿನ ನಂತರ ಇದೀಗ ಗೋಕಾಕ್ ಪ್ರತ್ಯೇಕ ಜಿಲ್ಲೆಯಾಗಬೇಕೆಂದು ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.




ಶಾಸಕ ಆನಂದ್ ಸಿಂಗ್ ಬಳ್ಳಾರಿ ಜಿಲ್ಲೆ ವಿಭಜನೆ ಮಾಡಿ ವಿಜಯನಗರವನ್ನು ಪ್ರತ್ಯೇಕ ಜಿಲ್ಲೆ ಮಾಡಬೇಕೆಂದು ಸಿಎಂ ಯಡಿಯೂರಪ್ಪ ಅವರ ಬಳಿ ಬೇಡಿಕೆ ಇಟ್ಟಿದ್ದು, ಇದಕ್ಕೆ ಸಿಎಂ ಅಸ್ತು ಎಂದಿದ್ದರು. ತದ ನಂತರ ಮತ್ತೊಬ್ಬ ಅನರ್ಹ ಶಾಸಕ ಹೆಚ್. ವಿಶ್ವನಾಥ್ ಅವರು ಮೈಸೂರು ವಿಭಜನೆಯಾಗಿ ಹುಣಸೂರನ್ನು ಪ್ರತ್ಯೇಕ ಜಿಲ್ಲೆ ಮಾಡಬೇಕೆಂದು ಸಿಎಂ ಬಳಿ ಮನವಿ ಮಾಡಿದ್ದಾರೆ. ಈ ಬಗ್ಗೆ ಬಾರೀ ಚರ್ಚೆ ನಡೆಯುತ್ತಿರುವಾಗಲೇ ಇದೀಗ  ರಮೇಶ್ ಜಾರಕಿಹೊಳಿ ಗೋಕಾಕ್ ಪ್ರತ್ಯೇಕ ಜಿಲ್ಲೆಯಾಗಬೇಕೆಂದು ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.


ಬೆಳಗಾವಿಯನ್ನು ಈಗಾಗಲೇ ವಿಭಜನೆ ಮಾಡಿ ಚಿಕ್ಕೋಡಿಯನ್ನು ಪ್ರತ್ಯೇಕ  ಜಿಲ್ಲೆಯನ್ನಾಗಿ ಮಾಡಲಾಗಿದೆ. ಆದರೆ ಇದೀಗ ರಮೇಶ್ ಜಾರಕಿಹೊಳಿ ಗೋಕಾಕ್ ನ್ನು ಜಿಲ್ಲೆಯನ್ನಾಗಿ ಮಾಡುವಂತೆ ಸಿಎಂ ಬಳಿ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಮೈತ್ರಿ ಸರ್ಕಾರ ಉರುಳಿಸಲು ಪ್ರಮುಖ ಕಾರಣರಾದ ರಮೇಶ್ ಜಾರಕಿಹೊಳಿ ಬೇಡಿಕೆಗೆ ಸಿಎಂ ಯಡಿಯೂರಪ್ಪ ಯಾವ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

48 ಗಂಟೆ ಕೆಲಸ ಮಾಡಿದರೆ 3 ದಿನ ವೀಕಾಫ್: ಕೇಂದ್ರದಿಂದ ಕಾರ್ಮಿಕ ಹೊಸ ನಿಯಮ

ದರ್ಶನ್ ಅರೆಸ್ಟ್ ಆದಾಗ ಪುತ್ರ ವಿನೀಶ್ ಪರಿಸ್ಥಿತಿ ಹೇಗಾಗಿತ್ತು: ವಿವರಿಸಿದ ಪತ್ನಿ ವಿಜಯಲಕ್ಷ್ಮಿ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ, ರಾಹುಲ್ ಗಾಂಧಿಗೆ ಬಿಗ್ ರಿಲೀಫ್

ನಾನೇ ಸಿಎಂ, 2028 ಕ್ಕೂ ನಾವೇ ಅಧಿಕಾರಕ್ಕೆ ಬರೋದು: ಸದನದಲ್ಲಿ ಸಿದ್ದರಾಮಯ್ಯ ಮಹತ್ವದ ಘೋಷಣೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments