ರಾಮೇಶ್ವರಂ ಕೆಫೆ ಆರೋಪಿ ಸುಳಿವು ಸಿಕ್ಕರೆ ಈ ನಂಬರ್ ಕರೆ ಮಾಡಬೇಕು

Krishnaveni K
ಗುರುವಾರ, 7 ಮಾರ್ಚ್ 2024 (13:24 IST)
Photo Courtesy: Twitter
ಬೆಂಗಳೂರು: ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ಆರೋಪಿ ಬಿಎಂಟಿಸಿ ಬಸ್‍ ನಲ್ಲಿ ಪ್ರಯಾಣಿಸಿದ್ದ ವಿಡಿಯೋಗಳನ್ನು ಪೊಲೀಸರು ಹೊರಹಾಕಿದ್ದಾರೆ. ಜೊತೆಗೆ ಆರೋಪಿಯ ಸ್ಕೆಚ್ ನ್ನೂ ಬಿಡುಗಡೆ ಮಾಡಲಾಗಿದೆ.

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ಆರೋಪಿಯ ಪತ್ತೆಗಾಗಿ ಪೊಲೀಸರು ಸಾರ್ವಜನಿಕರ ಸಹಾಯಕ್ಕೆ ಆಗ್ರಹಿಸಿದ್ದಾರೆ. ಈಗಾಗಲೇ ಆರೋಪಿಯ ಫೋಟೋ ಬಿಡುಗಡೆ ಮಾಡಿರುವ ಪೊಲೀಸರು ಸುಳಿವು ಕೊಟ್ಟವರಿಗೆ 10 ಲಕ್ಷ ರೂ. ಬಹುಮಾನ ಘೋಷಿಸಿದ್ದರು.

ಕನ್ನಡಕ ಧರಿಸಿದ್ದ ಆರೋಪಿ ಟೋಪಿಯನ್ನೂ ಹಾಕಿಕೊಂಡಿದ್ದ. ಹೊರಗೆ ಓಡಾಡುವಾಗ ಮಾಸ್ಕ್ ಧರಿಸಿ ತನ್ನ ಗುರುತು ಸಿಗದಂತೆ ನೋಡಿಕೊಂಡಿದ್ದ. ಆದರೆ ಬಿಎಂಟಿಸಿ ಬಸ್ ನಲ್ಲಿ ಮಾಸ್ಕ್ ತೆಗೆದಿದ್ದ. ಹೀಗಾಗಿ ಆತನ ಮುಖ ಚಹರೆ ಪತ್ತೆಯಾಗಿದೆ. ಹೀಗಾಗಿ ಅದನ್ನು ಅನುಸರಿಸಿ ಸ್ಕೆಚ್ ಒಂದನ್ನು ಬರೆದು ಪೊಲೀಸರು ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿದ್ದಾರೆ.

ಸ್ಕೆಚ್ ಮಾಡುವಾಗಲೂ ಪೊಲೀಸರು ಒಂದು ಮಾಸ್ಕ್ ಧರಿಸಿ ಮತ್ತೊಂದು ಮಾಸ್ಕ್ ಧರಿಸದೇ ಚಿತ್ರ ಬಿಡಿಸಿ ಪ್ರಕಟಿಸಿದ್ದಾರೆ. ಇದರಿಂದಾಗಿ ಯಾವುದೇ ಆಂಗಲ್ ನಲ್ಲಿ ಆರೋಪಿ ಬಗ್ಗೆ ಸುಳಿವು ಸಿಕ್ಕರೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಬಹುದು ಎಂಬುದು ಇದರ ಹಿಂದಿನ ಉದ್ದೇಶ. ಈ ಶಂಕಿತ ಉಗ್ರನ ಬಗ್ಗೆ ಸುಳಿವು ಸಿಕ್ಕರೆ 080-29510900, 8904241100 ಎಂಬ ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಬಹುದು. ಮಾಹಿತಿದಾರರ ಹೆಸರನ್ನು ಗೌಪ್ಯವಾಗಿಡಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments