Select Your Language

Notifications

webdunia
webdunia
webdunia
webdunia

ರಾಮೇಶ್ವರಂ ಕೆಫೆ ಸ್ಫೋಟದಲ್ಲಿ ಬಿಜೆಪಿ ಮುಖಂಡನ ವಿಚಾರಣೆ: ಧರ್ಮದ ಹೆಸರಿನಲ್ಲಿ ಕೇಸರಿ ಭಯೋತ್ಪಾದನೆ ಎಂದ ದಿನೇಶ್ ಗುಂಡೂರಾವ್

ರಾಮೇಶ್ವರಂ ಕೆಫೆ ಸ್ಫೋಟದಲ್ಲಿ ಬಿಜೆಪಿ ಮುಖಂಡನ ವಿಚಾರಣೆ: ಧರ್ಮದ ಹೆಸರಿನಲ್ಲಿ ಕೇಸರಿ ಭಯೋತ್ಪಾದನೆ ಎಂದ ದಿನೇಶ್ ಗುಂಡೂರಾವ್

Sampriya

ಬೆಂಗಳೂರು , ಶುಕ್ರವಾರ, 5 ಏಪ್ರಿಲ್ 2024 (17:56 IST)
Photo Courtesy X
ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಸಂಬಂಧಿಸಿದಂತೆ ಬಿಜೆಪಿ ಮುಖಂಡನನ್ನು ವಿಚಾರಣೆ ಸಲುವಾಗಿ ಎನ್‌ಐಎ ವಶಕ್ಕೆ ಪಡೆದಿದಿರುವ ಬೆನ್ನಲ್ಲೇ ಸಚಿವ ದಿನೇಶ್ ಗುಂಡೂರಾವ್ ಅವರು ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಈ ಬಗ್ಗೆ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಅವರು, ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯ ಬಿಜೆಪಿ ಮುಖಂಡ ಸಾಯಿಪ್ರಸಾದ್‌ನನ್ನು ರಾಷ್ಟ್ರೀಯ ತನಿಖಾ ದಳದವರು ವಶಕ್ಕೆ ಪಡೆದಿದ್ದಾರೆ ಎಂದು ದಿನೇಶ್ ಗುಂಡೂರಾವ್ .

ಸ್ಫೋಟಕ್ಕೆ ನಮ್ಮ ಸರ್ಕಾರವೇ ಕಾರಣ ಅನ್ನೋವಂತೆ ಮಾತಾನಾಡುತ್ತಿದ್ದ ರಾಜ್ಯದ ಕೇಸರಿ ಕಲಿಗಳು ಈಗ ಏನು ಹೇಳುತ್ತಾರೆ? ಬಿಜೆಪಿ ಮುಖಂಡನನ್ನು NIA ವಶಕ್ಕೆ ಪಡೆದಿದೆ ಎಂದ ಮೇಲೆ ರಾಮೇಶ್ವರಂ ಕೆಫೆ ಸ್ಫೋಟದಲ್ಲಿ ಬಿಜೆಪಿ ಕೈವಾಡ ಇದೆ ಎಂದು ಅರ್ಥಅಲ್ಲವೇ? ಧರ್ಮ ರಕ್ಷಣೆ ಹೆಸರಲ್ಲಿ ರಾಜ್ಯದಲ್ಲಿ ಬಿಜೆಪಿ ನಡೆಸುತ್ತೀರೋ ಕೇಸರಿ ಭಯೋತ್ಪಾದನೆ ಎಷ್ಟು ಗಂಭೀರ ಸಮಸ್ಯೆಗಳನ್ನು ಹುಟ್ಟು ಹಾಕುತ್ತಿದೆ ಅನ್ನೋದಕ್ಕೆ ಇದಕ್ಕಿಂತಾ ಸಾಕ್ಷಿ ಬೇಕಾ? ಆರ್‌ಎಸ್‌ಎಸ್‌ ಸಿದ್ಧಾಂತಗಳನ್ನು ದೇಶದ ಮೇಲೆ ಹೇರುತ್ತಿರುವ ಕೇಂದ್ರ ಬಿಜೆಪಿಯು ಇದಕ್ಕೇನು ಹೇಳುತ್ತದೆ?

ರಾಷ್ಟ್ರದ ಭದ್ರತೆ ವಿಚಾರವನ್ನೂ ಲೆಕ್ಕಿಸದೇ ರಾಮೇಶ್ವರಂ ಬಾಂಬ್‌ ಸ್ಫೋಟ ಪ್ರಕರಣವನ್ನು ಕಾಂಗ್ರೆಸ್‌ ಸರ್ಕಾರದ ಮೇಲೆ ಹೊರೆಸಿದ ರಾಜ್ಯ ಬಿಜೆಪಿ ನಾಯಕರು ಈಗ ಉತ್ತರ ನೀಡಲೇ ಬೇಕು.

Share this Story:

Follow Webdunia kannada

ಮುಂದಿನ ಸುದ್ದಿ

ಬೇಗನೆ ಎದ್ದು ಸೆಲ್‌ ಕ್ಲೀನ್‌ ಮಾಡುವುದರೊಂದಿಗೆ ಕೇಜ್ರಿವಾಲ್ ಜೈಲು ದಿನಚರಿ ಶುರು