Webdunia - Bharat's app for daily news and videos

Install App

ಪ್ರಿಯಾಂಕ್ ಖರ್ಗೆ ವಿರುದ್ಧ ರಾಮುಲು ವಾಗ್ದಾಳಿ

Webdunia
ಶನಿವಾರ, 13 ಆಗಸ್ಟ್ 2022 (17:43 IST)
ಸರ್ಕಾರದಲ್ಲಿ ಉದ್ಯೋಗ ಪಡೆಯಲು ಮಂಚ ಹತ್ತಬೇಕು ಎಂಬ ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ರಾಜ್ಯಾದ್ಯಂತ ಟೀಕೆ ವ್ಯಕ್ತವಾಗುತ್ತಿದೆ. ಬಳ್ಳಾರಿಯಲ್ಲಿ ಖರ್ಗೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸಚಿವ ಶ್ರೀರಾಮುಲು, ಪ್ರಿಯಾಂಕ್​ ಖರ್ಗೆ ತಮ್ಮ ತಂದೆಯ ಸಂಸ್ಕಾರವನ್ನು ಬೆಳೆಸಿಕೊಳ್ಳಲಿ ಎಂದು ವಾಗ್ದಾಳಿ ನಡೆಸಿದ್ದಾರೆ..ಲಂಚ, ಮಂಚ ಅಂತ ಹೇಳುವುದು ಹೀನಾಯ ಸಂಸ್ಕೃತಿಯನ್ನು ತೋರಿಸುತ್ತದೆ. ಈ ಹೇಳಿಕೆಯು ಕಾಂಗ್ರೆಸ್​ ಪಕ್ಷದ ಹೀನಾಯ ಸಂಸ್ಕೃತಿಯನ್ನ ತೋರಿಸುತ್ತದೆ. ಪ್ರಿಯಾಂಕ್​ ಖರ್ಗೆ ಸಂಸ್ಕಾರವಂತ ಅಂತ ಅಂದುಕೊಂಡಿದ್ದೆ. ಈ ಹಿಂದೆ ಸದನದಲ್ಲಿ ಸಣ್ಣ ಖರ್ಗೆ ಅಂತಾ ಉಲ್ಲೇಖಿಸಿ ಹೊಗಳಿದ್ದೆ. ಆದರೆ ಅವರು ತಮ್ಮ ತಂದೆಯನ್ನು ನೋಡಿ ಕಲಿಯಬೇಕು. ಪ್ರಿಯಾಂಕ್ ಅವರ ತಂದೆ ಬುದ್ದಿವಂತರು. ದಲಿತ ನಾಯಕರ ಮಗನಾಗಿ ಈ ರೀತಿ ಮಾತನಾಡುವುದು ಶೋಭೆ ತರುವುದಿಲ್ಲ. ಶಕ್ತಿ ಇದ್ದರೆ ಮುಂದಿನ ಚುನಾವಣೆಯಲ್ಲಿ ಗೆಲ್ಲಲು ಯತ್ನಿಸಲಿ. ಮಹಿಳೆಯರ ವಿರುದ್ಧ ಇಂತಹ ಮಾತು ಬಳಕೆ ಆಗಬಾರದು. ಕೂಡಲೇ ಪ್ರಿಯಾಂಕ್​ ಖರ್ಗೆ ಅವರು ಮಹಿಳೆಯರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments