Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯ ವಿರುದ್ಧ ರಾಮುಲು ಟ್ವೀಟ್ ಅಸ್ತ್ರ

webdunia
bangalore , ಮಂಗಳವಾರ, 30 ಆಗಸ್ಟ್ 2022 (18:39 IST)
ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಚಿವ ಶ್ರೀ ರಾಮುಲು ಟ್ವೀಟ್​ ಮಾಡಿ ವಾಗ್ದಾಳಿ ನೆಡೆಸಿದ್ದಾರೆ. ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ಧಿಯ ಬಿಡು. ದಾಸಶ್ರೇಷ್ಠ ಶ್ರೀ ಪುರಂದರದಾಸರು ಮಾಜಿ ಸಿ.ಎಂ. ಸಿದ್ದರಾಮಯ್ಯನಂತವರನ್ನು ನೋಡಿಯೇ ಈ ಪದವನ್ನು ಬರೆದಿದ್ದರೆ ಅಚ್ಚರಿಯಿಲ್ಲ. ಏಕೆಂದರೆ ನೀವು ಜೀವನದಲ್ಲಿ ಇನ್ನೊಬ್ಬರನ್ನು ಮುಗಿಸಿಯೇ ಮೇಲಕ್ಕೆ ಬಂದ ಮಹಾಪುರುಷ ತಾವಲ್ಲವೇ? ಸುಳ್ಳೇ ನಮ್ಮ ಮನೆದೇವರು ಎಂಬುದನ್ನು ನಿಮ್ಮನ್ನು ನೋಡಿ ಕಲಿಯಬೇಕು. ಏಕೆಂದರೆ ನೀವು ಹೇಳುವುದು ಒಂದು, ಮಾಡುವುದು ಇನ್ನೊಂದು ಎಂಬುದು ‌ಎಲ್ಲರಿಗೂ ಗೊತ್ತಿರುವ ವಿಷಯ.! ಇಂತಹ ಕಲೆ ನಿಮಗಲ್ಲದೆ ಬೇರೆಯವರಿಗೆ ಬರಲು ಹೇಗೆ ಸಾಧ್ಯ? ಸುಳ್ಳಿನ ರಾಮಯ್ಯನವರೇ?ಮಾತೆತ್ತಿದರೆ ಅಹಿಂದ ಬಗ್ಗೆ ಮೊಸಳೆ ಕಣ್ಣೀರು ಸುರಿಸುವ ನೀವು 2018 ರ ವಿಧಾನಸಭೆ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಾ.ಜಿ.ಪರಮೇಶ್ವರ್ ಅವರಿಗೆ ಕೊರಟಗೆರೆಯಲ್ಲಿ ಬೆನ್ನಿಗೆ ಚೂರಿ ಹಾಕಿದ್ದು ಯಾರು? ಯಾವ ಯಾವ ಸಂಧರ್ಭದಲ್ಲಿ ಯಾರ ಕುತ್ತಿಗೆ ಕೊಯ್ದಿರಿ ಎಂಬುದನ್ನು ಬಹಿರಂಗ ಪಡಿಸಲೇ ಚೂರಿ ರಾಮಯ್ಯನವರೇ? ಅಹಿಂದ ನಾಯಕರನ್ನು ಮುಗಿಸಿರುವ ನಿಮ್ಮ ಮುಂದಿನ ಗುರಿ ಒಕ್ಕಲಿಗರಾ? ಅದರಲ್ಲೂ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಇರಬಹುದೇ? ಎಲ್ಲಿ ನನಗೆ ಸ್ಪರ್ಧೆಯೊಡ್ಡಬಹುದು ಎಂಬ ಆತಂಕದಿಂದ ಅವರನ್ನೂ ಮೂಲೆಗುಂಪು ಮಾಡುವ ನಿಮ್ಮ ಯತ್ನ ಮುಗಿದಿಯೇ ಇಲ್ಲವೇ ಮುಂದುವರೆಯುವುದೋ?

Share this Story:

Follow Webdunia kannada

ಮುಂದಿನ ಸುದ್ದಿ

ಮಹಾಮಳೆಗೆ ರಾಮನಗರ ತತ್ತರ