Publish Date: Wed, 10 Oct 2018 (08:46 IST)
Updated Date: Wed, 10 Oct 2018 (08:47 IST)
ಬೆಂಗಳೂರು : ಮಾಜಿ ಸಂಸದೆ ಮತ್ತು ಎಐಸಿಸಿ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಮೇಲೆ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ.
ಕಾಂಗ್ರೆಸ್ ಐಟಿ ಸೆಲ್ ನಲ್ಲಿ ಮಹಿಳಾ ಸಿಬ್ಬಂದಿಯೊಬ್ಬರು ಐಟಿ ಸೆಲ್ ಸದಸ್ಯ ಚಿರಾಗ್ ಪಟ್ನಾಯಕ್ ಹಲವು ಬಾರಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪ ಮಾಡಿದ್ದರು. ಆದರೆ ಈ ಬಗ್ಗೆ ಕಾಂಗ್ರೆಸ್ ಐಟಿ ಸೆಲ್ ಮುಖ್ಯಸ್ತೆ ರಮ್ಯಾ ಅವರ ಬಳಿ ದೂರು ಕೊಟ್ಟರೂ ಕೂಡ ಲೈಂಗಿಕ ಕಿರುಕುಳ ನೀಡಿದ್ದ ಪಟ್ನಾಯಕ್ ವಿರುದ್ಧ ಕ್ರಮ ತೆಗೆದುಕೊಂಡಿಲ್ಲ.
ಅಲ್ಲದೇ ರಮ್ಯಾ ಅವರು ನನ್ನನ್ನೇ ಸಾರ್ವಜನಿಕವಾಗಿ ನಿಂದಿಸಿದ್ದಾರೆ. ಅಷ್ಟೇ ಅಲ್ಲದೇ ಲೈಂಗಿಕ ಕಿರುಕುಳ ಕೊಟ್ಟ ಐಟಿ ಸೆಲ್ ಸದಸ್ಯ ಚಿರಾಗ್ ಪಟ್ನಾಯಕ್ ಪರ ರಮ್ಯಾ ನಿಂತಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಈ ಹಿನ್ನಲೆಯಲ್ಲಿ ಚಾರ್ಜ್ ಶೀಟ್ ನಲ್ಲಿ ರಮ್ಯಾ ಹೆಸರು ಉಲ್ಲೇಖವಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.