Publish Date: Wed, 18 Apr 2018 (09:44 IST)
Updated Date: Wed, 18 Apr 2018 (09:46 IST)
ಬೆಂಗಳೂರು: ಕಾಂಗ್ರೆಸ್ ಪಕ್ಷದ ಸೋಷಿಯಲ್ ಮೀಡಿಯಾ ಮುಖ್ಯಸ್ಥೆ ನಟಿ ರಮ್ಯಾ ಮತ್ತೆ ಪ್ರಧಾನಿ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ.
ಬಿಜೆಪಿಗೆ ಸುಳ್ಳು ಸುದ್ದಿ ಹರಡಲು ಸಾಮಾಜಿಕ ಜಾಲತಾಣಗಳ ಅಗತ್ಯವಿಲ್ಲ. ಆಧಾರವಿಲ್ಲದ ಸುಳ್ಳು ಸುದ್ದಿಗಳನ್ನು ಹರಡಲು ಅವರಿಗೆ ಪ್ರಧಾನಿ ಮೋದಿಯೇ ಸಾಕು ಎಂದು ಆಂಗ್ಲ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ರಮ್ಯಾ ಹೇಳಿಕೆ ಕೊಟ್ಟಿದ್ದಾರೆ.
ಹಿಂದೆಯೂ ಹಲವು ಬಾರಿ ರಮ್ಯಾ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿ ವ್ಯಾಪಕ ಟೀಕೆಗೊಳಗಾಗಿದ್ದರು. ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಸುಳ್ಳು ಸುದ್ದಿಗಳ ಬಗ್ಗೆ ಹೇಳುತ್ತಾ ಸಂದರ್ಶನದಲ್ಲಿ ರಮ್ಯಾ ಮೋದಿ ವಿರುದ್ಧ ಇಂತಹದ್ದೊಂದು ಹೇಳಿಕೆ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.