ಮಾಜಿ ಸಂಸದೆ ರಮ್ಯ ಜನಪ್ರತಿನಿಧಿಯಾಗಲು ನಾಲಾಯಕ್ ಆಗಿದ್ದಾರೆ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ಲೇವಡಿ ಮಾಡಿದ್ದಾರೆ.
ರಮ್ಯ ವರ್ತನೆಯನ್ನು ನೋಡಿಯೇ ಮಂಡ್ಯದ ಜನತೆ ಅವರನ್ನು ತಿರಸ್ಕರಿಸಿದ್ದಾರೆ. ಅವರೊಬ್ಬ ಅಪ್ರಸ್ತುತ ಮಹಿಳೆ ಎಂದು ಹರಿಹಾಯ್ದಿದ್ದಾರೆ. ಅವರಿಗೆ ಜನಪರ ಕಾಳಜಿಯಿಲ್ಲ. ಜನರ ಸಂಕಷ್ಟದ ಅರಿವಂತೂ ಇಲ್ಲವೇ ಇಲ್ಲ ಎಂದು ಕಿಡಿಕಾರಿದ್ದಾರೆ.
ಸಂಪೂರ್ಣ ಕರ್ನಾಟಕ ಜನರು ಕಾವೇರಿ ನೀರಿಗಾಗಿ ಹೋರಾಟ ನಡೆಸುತ್ತಿರುವಾಗ, ರೈತರು ಯಾಕೆ ಹೋರಾಟ ಮಾಡುತ್ತಿದ್ದಾರೆ ಎಂದು ಟ್ವೀಟ್ ಮಾಡಿ ಪ್ರಶ್ನಿಸಿರುವುದು ಹಾಸ್ಯಾಸ್ಪದವಾಗಿದೆ ಎಂದು ತಿರುಗೇಟು ನೀಡಿದ್ದಾರೆ.
ಮಾಜಿ ಸಂಸದೆ ರಮ್ಯ ವರ್ತನೆಗೆ ಮುಂಬರುವ ದಿನಗಳಲ್ಲಿ ಜನತೆತಕ್ಕ ಪಾಠ ಕಲಿಸುತ್ತಾರೆ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ್ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ