Publish Date: Tue, 28 Nov 2017 (18:27 IST)
Updated Date: Tue, 28 Nov 2017 (18:30 IST)
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿ ಎಂದು ಕಾಂಗ್ರೆಸ್ ಪಕ್ಷದ ಮಾಜಿ ಸಂಸದೆ ರಮ್ಯ ಸಿಎಂ ಸಿದ್ದರಾಮಯ್ಯರಿಗೆ ಮನವಿ ಮಾಡಿದ್ದಾರೆ.
ಮಂಡ್ಯ ಲೋಕಸಭೆ ಕ್ಷೇತ್ರದಿಂದ ಆಯ್ಕೆಯಾಗಿ ಜೆಡಿಎಸ್ ಬಲಾಢ್ಯ ಕೋಟೆಯನ್ನು ಭೇಧಿಸಿದ್ದ ರಮ್ಯ, ಇದೀಗ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಬಲ ತಂದುಕೊಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮುಂದಿನ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯಿಂದಲೇ ಸ್ಪರ್ಧಿಸುವ ಬಗ್ಗೆ ಇಂಗಿತ ವ್ಯಕ್ತಪಡಿಸಿದ್ದಾರೆ ಎನ್ನಲಾಗುತ್ತಿದೆ. ಆದರೆ. ಸಿಎಂ ಅದಕ್ಕೆ ಯಾವುದೇ ಭರವಸೆ ನೀಡಿಲ್ಲ ಎನ್ನಲಾಗುತ್ತಿದೆ.
ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷದ ಭಾರಿ ಪ್ರಭಾವವಿರುವ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಪಕ್ಷ ತಮ್ಮ ಅಸ್ತಿತ್ವ ಸಾಬೀತುಪಡಿಸುವಂತಹ ಸ್ಥಿತಿ ಎದುರಾಗಿದೆ ಎನ್ನಲಾಗುತ್ತಿದೆ. ರಮ್ಯ ಸ್ಪರ್ಧೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಅಲ್ಪಮಟ್ಟಿನ ಬಲ ತಂದುಕೊಡುವುದು ಸತ್ಯ ಎಂದು ಹೇಳಲಾಗುತ್ತಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.