Webdunia - Bharat's app for daily news and videos

Install App

ಯಲ್ಲಮ್ಮನ ಜಾತ್ರೆಯಲ್ಲಿ ಎಗ್ಗಿಲ್ಲದೇ ನಡೆಯಿತು ಜೂಜು

Webdunia
ಬುಧವಾರ, 20 ಫೆಬ್ರವರಿ 2019 (16:39 IST)
ಹಾಡು ಹಗಲಲ್ಲೇ ಜೂಜು ನಡೆಯುತ್ತಿದ್ದರೂ ಅಧಿಕಾರಿಗಳು ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ.

ಹೊರರಾಜ್ಯದಿಂದ ಸವದತ್ತಿ ಯಲ್ಲಮ್ಮನಿಗೆ ಬರುವ ಭಕ್ತರ ಸಂಖ್ಯೆ ದಿನೆ ದಿನೇ ಹೆಚ್ಚುತ್ತಿದೆ. ಇನ್ನೊಂದೆಡೆ ಜೂಜಾಟ ರಾಜಾರೋಷವಾಗಿ ನಡೆದಿರುವುದು ಸ್ಥಳೀಯ ಭಕ್ತರನ್ನು ಕೆರಳಿಸಿದೆ.

 ಸ್ಥಳೀಯ ಅಧಿಕಾರಿ ಹಾಗೂ ರಾಜಕೀಯ ಮುಖಂಡರು ಇದರಲ್ಲಿ ಶಾಮೀಲಾಗಿದ್ದಾರೆ ಎಂದು ಭಕ್ತಾಧಿಗಳು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೇರೆ ಕಡೆಯಿಂದ ಆಗಮಿಸಿರುವ ಈ ಜೂಜುಕೋರರಿಗೆ, ಪೊಲೀಸ್ ಇಲಾಖೆಯ ಭಯವೇ ಇಲ್ಲದಂತೆ ವರ್ತಿಸುತ್ತಿದ್ದಾರೆ. ಈ ಬಗ್ಗೆ ಪ್ರಶ್ನಿಸಿದರೆ ಅವರ ಮೇಲೆ ದೌರ್ಜನ್ಯಕ್ಕೆ ಮುಂದಾಗುತ್ತಿದ್ದಾರೆ. ಇತ್ತೀಚಿನ ದಿನದಲ್ಲಿ ಅಕ್ರಮಗಳ ತಾಣವಾಗಿ ಮಾರ್ಪಟ್ಟಿದ್ದರೂ ಸ್ಥಳೀಯ ಆಡಳಿತ ಕಿಂಚಿತ್ತೂ ತಲೆ ಕೆಡಿಸಿಕೊಳ್ಳದಿರುವುದು ಭಕ್ತರ ಅಸಮಧಾನಕ್ಕೆ ಕಾರಣವಾಗುತ್ತಿದೆ.

ಈ ಬಗ್ಗೆ ಜಿಲ್ಲಾಡಳಿತ ಮಧ್ಯ ಪ್ರವೇಶಿಸಿ ಸ್ಥಳೀಯರ ತೊಂದರೆ ಪರಿಹರಿಸಬೇಕು ಎಂದು ಭಕ್ತಾಧಿಗಳು ಆಗ್ರಹಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಂಡಮಾರುತ ಎಫೆಕ್ಟ್‌, ದೇಶದ ಈ ಭಾಗದಲ್ಲಿ ಆ.7ರ ವರೆಗೆ ಭಾರೀ ಮಳೆ

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್‌ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಸೇನಾಧಿಕಾರಿ, ಕಾರಣ ಇಲ್ಲಿದೆ

ಭಾರೀ ರಾಜಕೀಯ ಬೆಳವಣಿಗೆ ಬೆನ್ನಲ್ಲೇ ರಾಷ್ಟ್ರಪತಿಯನ್ನು ಭೇಟಿಯಾದ ಪ್ರಧಾನಿ ಮೋದಿ

ಉತ್ತರಪ್ರದೇಶ: ಪೃಥ್ವಿನಾಥ ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 11 ಮಂದಿ

ಮೀರತ್‌ ಭಯಾನಕ ಅಪರಾಧ: 7 ತಿಂಗಳ ಗರ್ಭಿಣಿಯನ್ನು ಚಾಕುವಿನಿಂದ ಇರಿದು ಕೊಂದ ಪತಿ

ಮುಂದಿನ ಸುದ್ದಿ
Show comments