ಇವಿಎಂ ಬದಲು ಬ್ಯಾಲೆಟ್ ಪೇಪರ್: ರಾಹುಲ್ ಗಾಂಧಿ ಬೇಡಿಕೆ ಕರ್ನಾಟಕ ಈಡೇರಿಸಿತು ಎಂದ ರಣದೀಪ್

Krishnaveni K
ಶುಕ್ರವಾರ, 5 ಸೆಪ್ಟಂಬರ್ 2025 (20:39 IST)

ಬೆಂಗಳೂರು: ಕರ್ನಾಟಕದಲ್ಲಿ ಸ್ಥಳೀಯ ಚುನಾವಣೆಗಳಲ್ಲಿ ಮತದಾನಕ್ಕೆ ಇವಿಎಂ ಬದಲು ಬ್ಯಾಲೆಟ್ ಪೇಪರ್ ಬಳಕೆಯನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸ್ವಾಗತಿಸಿದ್ದು ಇದು ರಾಹುಲ್ ಗಾಂಧಿಯವರ ಬಹುದಿನಗಳ ಬೇಡಿಕೆಯಾಗಿತ್ತು ಎಂದಿದ್ದಾರೆ.

‘ಕಾಂಗ್ರೆಸ್ ಪಕ್ಷದ ಮುಖಂಡರು, ಲೋಕಸಭೆ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿಯವರು ಇವಿಎಂ ವಿವಾದದ ಕುರಿತು ಸ್ಪಷ್ಟವಾದ ನಿಲುವು ಹೊಂದಿದ್ದಾರೆ. ಅವರು ಇವಿಎಂಗಳ ಬದಲಿಗೆ ಬ್ಯಾಲೆಟ್ ಪೇಪರ್ ವ್ಯವಸ್ಥೆಯ ಮರುಸ್ಥಾಪನೆಗೆ ನಿರಂತರವಾಗಿ ಆಗ್ರಹಿಸಿದ್ದಾರೆ. ಪ್ರಜಾಪ್ರಭುತ್ವದ ಮೂಲ ತತ್ವವೇ ಜನರ ಅಭಿಪ್ರಾಯಗಳ ಪ್ರತಿಬಿಂಬ. ಇವಿಎಂ ಮೂಲಕ ವ್ಯಕ್ತವಾಗುವ ಮತದಾನದ ಬದಲು, ಬ್ಯಾಲೆಟ್ ಪೇಪರ್ ಬಳಕೆಯು ಪ್ರತಿ ಮತವೂ ನಿಷ್ಪಕ್ಷಪಾತವಾಗಿ ಎಣಿಕೆಯಾಗುತ್ತಿದೆ ಎಂಬ ಭರವಸೆಯನ್ನು ನೀಡುತ್ತದೆ. ಇದು ಮತದಾರರ ಹಕ್ಕುಗಳನ್ನು ಬಲಪಡಿಸುತ್ತದೆ’ ಎಂದು ರಣದೀಪ್ ಸುರ್ಜೇವಾಲ ಹೇಳಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ಇವಿಎಂನ ವಿಶ್ವಾಸಾರ್ಹತೆಯ ಕುರಿತು ಹಲವು ಅನುಮಾನಗಳು ಮತ್ತು ಪ್ರಶ್ನೆಗಳು ರಾಜಕೀಯ ವಲಯಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ವ್ಯಾಪಕವಾಗಿ ಚರ್ಚೆಯಾಗುತ್ತಿವೆ. ಎಲೆಕ್ಟ್ರಾನಿಕ್ ಮತಯಂತ್ರಗಳಲ್ಲಿನ ತಾಂತ್ರಿಕ ದೋಷಗಳು, ಹ್ಯಾಕಿಂಗ್ ಸಾಧ್ಯತೆಗಳು ಮತ್ತು ಫಲಿತಾಂಶಗಳ ಕುರಿತು ವ್ಯಕ್ತವಾಗುತ್ತಿರುವ ಗೊಂದಲಗಳು ಮತದಾರರಲ್ಲಿ ವಿಶ್ವಾಸದ ಕೊರತೆಯನ್ನು ಸೃಷ್ಟಿಸಿವೆ. ನಮ್ಮ ಪ್ರಜಾಪ್ರಭುತ್ವದ ಹೃದಯ ಭಾಗವಾಗಿರುವ ಮತದಾನ ಪ್ರಕ್ರಿಯೆಯು ಸಂಪೂರ್ಣವಾಗಿ ಪಾರದರ್ಶಕ ಮತ್ತು ಎಲ್ಲರ ನಂಬಿಕೆಗೆ ಅರ್ಹವಾಗಿರಬೇಕು’ ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಟನೆಲ್ ರೋಡ್ ಹೆಸರಲ್ಲಿ ಜನರ ಜೀವದ ಜೊತೆ ಚೆಲ್ಲಾಟ ಬೇಡ: ಶೋಭಾ ಕರಂದ್ಲಾಜೆ ಎಚ್ಚರಿಕೆ

ಬೆಂಗಳೂರು ಸುರಂಗ ರಸ್ತೆ ನೆಪದಲ್ಲಿ ದುಡ್ಡು ಹೊಡೆಯುವ ಸ್ಕೀಮ್: ಆರ್ ಅಶೋಕ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬಿಹಾರ ಚುನಾವಣೆ ನ್ಯಾಯವಾಗಿ ನಡೆದಿಲ್ಲ ಎಂದ ರಾಹುಲ್ ಗಾಂಧಿ: ವಿದೇಶದಲ್ಲಿ ಕೂತು ನೆಪ ಹೇಳ್ತೀರಿ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments