Select Your Language

Notifications

webdunia
webdunia
webdunia
webdunia

ರಾಣೆಬೆನ್ನೂರಿನ ನರ್ಸ್‌ ಸ್ವಾತಿ ಕೊಲೆ ಪ್ರಕರಣ: ಮತ್ತಿಬ್ಬರು ಆರೋಪಿಗಳು ಪೊಲೀಸ್‌ ಬಲೆಗೆ

Nurse Swathi murder case

Sampriya

ಹಾವೇರಿ , ಭಾನುವಾರ, 16 ಮಾರ್ಚ್ 2025 (10:37 IST)
ಹಾವೇರಿ: ರಾಣೆಬೆನ್ನೂರಿನ ನರ್ಸ್‌ ಸ್ವಾತಿ ಕೊಲೆ ಪ್ರಕರಣದ ಮತ್ತಿಬ್ಬರು ಆರೋಪಿಗಳು ಹಾವೇರಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ದುರ್ಗಾಚಾರಿ ಬಸವರಾಜಚಾರಿ ಬಡಿಗೇರ (25) ಹಾಗೂ ವಿನಾಯಕ ನಾಗಪ್ಪ ಪೂಜಾರ (27) ಬಂಧಿತರು.

ಸ್ವಾತಿಯನ್ನು ಪ್ರೀತಿಸುತ್ತಿದ್ದ ನಯಾಜ್ ತನ್ನ ಮತ್ತಿಬ್ಬರು ಸ್ನೇಹಿತರ ಜೊತೆ ಸೇರಿ ಆಕೆಯನ್ನು‌ ಕೊಲೆ ಮಾಡಿದ್ದಾನೆ. ನಯಾಜ್​​ನನ್ನು ಬಂಧಿಸಿ ತನಿಖೆ ಆರಂಭಿಸಿರುವ ಪೊಲೀಸರು, ಇದೀಗ ಮತ್ತಿಬ್ಬರು ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.

ರಟ್ಟೀಹಳ್ಳಿ ತಾಲ್ಲೂಕಿನ ಮಾಸೂರಿನ ಸ್ವಾತಿ ಅವರನ್ನು ಮಾರ್ಚ್ 3ರಂದು ಕೊಲೆ ಮಾಡಿ ಮೃತದೇಹವನ್ನು ತುಂಗಭದ್ರಾ ನದಿಯಲ್ಲಿ ಎಸೆಯಲಾಗಿತ್ತು. ಈ ಘಟನೆ ರಾಜ್ಯದಲ್ಲಿ ದೊಡ್ಡ ಸಂಚಲನವನ್ನೇ ಸೃಷ್ಟಿಸಿದೆ.

ಆರಂಭದಲ್ಲಿ ಅಪರಿಚಿತ ಶವ ಸಿಕ್ಕಿರುವುದಾಗಿ ತನಿಖೆ ಆರಂಭಿಸಿದ್ದ ಪೊಲೀಸರಿಗೆ ಅದು ಸ್ವಾಭಾವಿಕ ಸಾವಲ್ಲ ಕೊಲೆ ಎಂಬುದು ಮರಣೋತ್ತರ ಪರೀಕ್ಷೆಯಿಂದ ಗೊತ್ತಾಗಿತ್ತು. ತನಿಖೆ ಚುರುಕುಗೊಳಿಸಿದ ಪೊಲೀಸರು ಪ್ರಮುಖ ಆರೋಪಿ ನಯಾಜ್‌ನನ್ನು ಬಂಧಿಸಿದ್ದರು. ಈ ಮಧ್ಯೆ ಜಸ್ಟಿಸ್‌ ಫಾರ್‌ ಸ್ವಾಮಿ ಎಂಬ ಅಭಿಯಾನವು ಶುರುವಾಗಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ಕೇವಲ ಮುಸ್ಲಿಮರಿಗೆ ಮಾತ್ರ ಮೀಸಲಾತಿ ಎಂದು ಹೇಳಿದವರು ಯಾರು: ಡಿಕೆ ಶಿವಕುಮಾರ್