Webdunia - Bharat's app for daily news and videos

Install App

ರಾಣೆಬೆನ್ನೂರಿನ ನರ್ಸ್‌ ಸ್ವಾತಿ ಕೊಲೆ ಪ್ರಕರಣ: ಮತ್ತಿಬ್ಬರು ಆರೋಪಿಗಳು ಪೊಲೀಸ್‌ ಬಲೆಗೆ

Sampriya
ಭಾನುವಾರ, 16 ಮಾರ್ಚ್ 2025 (10:37 IST)
ಹಾವೇರಿ: ರಾಣೆಬೆನ್ನೂರಿನ ನರ್ಸ್‌ ಸ್ವಾತಿ ಕೊಲೆ ಪ್ರಕರಣದ ಮತ್ತಿಬ್ಬರು ಆರೋಪಿಗಳು ಹಾವೇರಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ದುರ್ಗಾಚಾರಿ ಬಸವರಾಜಚಾರಿ ಬಡಿಗೇರ (25) ಹಾಗೂ ವಿನಾಯಕ ನಾಗಪ್ಪ ಪೂಜಾರ (27) ಬಂಧಿತರು.

ಸ್ವಾತಿಯನ್ನು ಪ್ರೀತಿಸುತ್ತಿದ್ದ ನಯಾಜ್ ತನ್ನ ಮತ್ತಿಬ್ಬರು ಸ್ನೇಹಿತರ ಜೊತೆ ಸೇರಿ ಆಕೆಯನ್ನು‌ ಕೊಲೆ ಮಾಡಿದ್ದಾನೆ. ನಯಾಜ್​​ನನ್ನು ಬಂಧಿಸಿ ತನಿಖೆ ಆರಂಭಿಸಿರುವ ಪೊಲೀಸರು, ಇದೀಗ ಮತ್ತಿಬ್ಬರು ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.

ರಟ್ಟೀಹಳ್ಳಿ ತಾಲ್ಲೂಕಿನ ಮಾಸೂರಿನ ಸ್ವಾತಿ ಅವರನ್ನು ಮಾರ್ಚ್ 3ರಂದು ಕೊಲೆ ಮಾಡಿ ಮೃತದೇಹವನ್ನು ತುಂಗಭದ್ರಾ ನದಿಯಲ್ಲಿ ಎಸೆಯಲಾಗಿತ್ತು. ಈ ಘಟನೆ ರಾಜ್ಯದಲ್ಲಿ ದೊಡ್ಡ ಸಂಚಲನವನ್ನೇ ಸೃಷ್ಟಿಸಿದೆ.

ಆರಂಭದಲ್ಲಿ ಅಪರಿಚಿತ ಶವ ಸಿಕ್ಕಿರುವುದಾಗಿ ತನಿಖೆ ಆರಂಭಿಸಿದ್ದ ಪೊಲೀಸರಿಗೆ ಅದು ಸ್ವಾಭಾವಿಕ ಸಾವಲ್ಲ ಕೊಲೆ ಎಂಬುದು ಮರಣೋತ್ತರ ಪರೀಕ್ಷೆಯಿಂದ ಗೊತ್ತಾಗಿತ್ತು. ತನಿಖೆ ಚುರುಕುಗೊಳಿಸಿದ ಪೊಲೀಸರು ಪ್ರಮುಖ ಆರೋಪಿ ನಯಾಜ್‌ನನ್ನು ಬಂಧಿಸಿದ್ದರು. ಈ ಮಧ್ಯೆ ಜಸ್ಟಿಸ್‌ ಫಾರ್‌ ಸ್ವಾಮಿ ಎಂಬ ಅಭಿಯಾನವು ಶುರುವಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಆಪರೇಷನ್ ಸಿಂದೂರ ಬಳಿಕ ರಾಹುಲ್ ಗಾಂಧಿ, ಖರ್ಗೆ ಇಷ್ಟು ಗಂಭೀರ ಯಾಕೆ: ನೆಟ್ಟಿಗರ ಪ್ರಶ್ನೆ

Operation Sindoor: ಸರ್ವಪಕ್ಷ ಸಭೆಗೆ ಮತ್ತೆ ಪ್ರಧಾನಿ ಮೋದಿ ಗೈರು: ವಿಪಕ್ಷಗಳ ಕೆಂಗಣ್ಣು

Arecanut price today: ಅಡಿಕೆ ಬೆಳೆಗಾರರಿಗೆ ಇಂದು ನಿರಾಸೆ, ಇಂದಿನ ದರ ಎಷ್ಟಾಗಿದೆ ನೋಡಿ

Shocking video: ದುಪ್ಪಟ್ಟು ದರ ವಸೂಲಿ ಮಾಡುತ್ತಿರುವುದೇಕೆ ಪ್ರಶ್ನಿಸಿದ್ದಕ್ಕೆ ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿದ ರೈಲು ಸಿಬ್ಬಂದಿ

Gold Price today: ಲಕ್ಷ ಗಡಿ ದಾಟಿದ್ದ ಚಿನ್ನ ಇಂದು ಮತ್ತಷ್ಟು ಏರಿಕೆ

ಮುಂದಿನ ಸುದ್ದಿ
Show comments