Publish Date: Mon, 08 Aug 2022 (16:00 IST)
Updated Date: Mon, 08 Aug 2022 (16:03 IST)
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ವಿಶ್ವ ಪ್ರಸಿದ್ಧ ರಂಗನತಿಟ್ಟು ಪಕ್ಷಿಧಾಮ ಭಾಗಶಃ ಮುಳುಗಡೆಯಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಅಬ್ಬರ ಹಿನ್ನೆಲೆಯಲ್ಲಿ ಅಣೆಕಟ್ಟೆಗೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ಭಾರಿ ಏರಿಕೆಯಾಗಿರುವ ಕಾರಣ ಕಾವೇರಿ ನದಿಗೆ ನೀರು ಬಿಡಲಾಗಿದೆ. ಗೂಡು, ಮೊಟ್ಟೆ ರಕ್ಷಿಸಿಕೊಳ್ಳಲು ಪಕ್ಷಿ ಸಂಕುಲ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.. ಎತ್ತರದ ಮರದಲ್ಲಿ ಕೆಲ ಪಕ್ಷಿಗಳು ಆಶ್ರಯ ಪಡೆದಿದ್ದಾವೆ. ಮುನ್ನೆಚ್ಚರಿಕೆ ಕ್ರಮವಾಗಿ ಪಕ್ಷಿಧಾಮದ ಬೋಟಿಂಗ್ ಸ್ಥಗಿತ ಮಾಡಲಾಗಿದೆ.