ನವದೆಹಲಿ : ಸುಪ್ರೀಂ ಕೋರ್ಟ್ ನ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗೊಯ್ ಅವರು ರಾಜ್ಯಸಭೆಗೆ ನಾಮನಿರ್ದೇಶಿತ ಸದಸ್ಯರಾಗಿ ನೇಮಕಗೊಂಡಿದ್ದಾರೆ. ಹಿರಿಯ ವಕೀಲೆ ಕೆಟಿಎಸ್ ತುಳಸಿ ಅವರ ನಿವೃತ್ತಿಯಿಂದ ತೆರವಾಗಿದ್ದ ಈ ಸ್ಥಾನಕ್ಕೆ ರಂಜನ್ ಗೋಗೊಯ್ ಅವರನ್ನು ನಾಮನಿರ್ದೇಶಿತ ಸದಸ್ಯರನ್ನಾಗಿ ನೇಮಕ ಮಾಡುವಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆದೇಶಿಸಿದ್ದಾರೆ, ನಿನ್ನೆ ಈ ಬಗ್ಗೆ ಅಧಿಕೃತ ಗೆಜೆಟ್ ನೋಟಿಪಿಕೇಷನ್ ಹೊರಡಿಸಲಾಗಿದೆ.