Publish Date: Thu, 17 Nov 2022 (07:54 IST)
Updated Date: Thu, 17 Nov 2022 (08:55 IST)
ಚಿಕ್ಕೋಡಿ : ನನ್ನನ್ನು ವೈಯಕ್ತಿಕವಾಗಿ ಟೀಕೆ ಮಾಡಿದ್ರೆ ಸುಮ್ಮನಿರುತ್ತೇನೆ. ಜಾತಿ ಹಿಡಿದು ಟೀಕೆ ಮಾಡಿದ್ರೂ ಸುಮ್ಮನಿರುತ್ತೇನೆ. ಆದರೆ ಹಿಂದೂ ಧರ್ಮದ ಕುರಿತು ಮಾತನಾಡಿದ್ರೆ ಸುಮ್ಮನಿರಲ್ಲ.
ಸತೀಶ್ ಜಾರಕಿಹೊಳಿಯವರೇ ನಿಮಗೆ ತಾಕತ್ತಿದ್ದರೆ ಬಹಿರಂಗ ಚರ್ಚೆಗೆ ಬನ್ನಿ ಎಂದು ಯುವ ಬ್ರಿಗೆಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಸವಾಲು ಹಾಕಿದರು.
ಹಿಂದೂ ಪದವನ್ನು ಅಶ್ಲೀಲ ಎಂದು ಜರಿದಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಗೆ ಅವರದ್ದೇ ಕ್ಷೇತ್ರ ಯಮಕನಮರಡಿಯಲ್ಲಿ ಹಿಂದೂ ಪರ ಸಂಘಟನೆಗಳು ಸೆಡ್ಡು ಹೊಡೆದು ʼನಾನು ಹಿಂದೂʼ ಸಮಾವೇಶ ಆಯೋಜಿಸಿವೆ. ಸಮಾವೇಶದಲ್ಲಿ ಸತೀಶ್ ಜಾರಕಿಹೊಳಿ ವಿರುದ್ಧ ಚಕ್ರವರ್ತಿ ಸೂಲಿಬೆಲೆ ವಾಗ್ದಾಳಿ ನಡೆಸಿದರು.