Select Your Language

Notifications

webdunia
webdunia
webdunia
webdunia

ಚಿನ್ನ ಕಳ್ಳಸಾಗಣೆಯಲ್ಲಿ ಲಾಕ್ ಆಗಿರುವ ರನ್ಯಾ ರಾವ್ ಮಲತಂದೆ ಐಜಿ‍ಪಿ ರಾಮಚಂದ್ರರ ಇದೆಂಥಾ ಸರಸದಾಟ

Ramachandra Rao

Sampriya

ಬೆಂಗಳೂರು , ಸೋಮವಾರ, 19 ಜನವರಿ 2026 (15:31 IST)
Photo Credit X
ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರನ್ಯಾ ರಾವ್ ಅವರ ಮಲತಂದೆ ಐಜಿಪಿ ರಾಮಚಂದ್ರ ರಾವ್ ಅವರ ಯುವತಿಯರ ಜತೆಗಿನ ಸರಸದಲ್ಲಿ ತೊಡಗಿರುವ ಹಸಿಬಿಸಿ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ತಮ್ಮ ಕಚೇರಿಯಲ್ಲೇ ಸಮವಸ್ತ್ರ ಧರಿಸಿ ಮಹಿಳೆಯರೊಂದಿಗೆ ಸರಸವಾಡಿರುವ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ರಾಮಚಂದ್ರ ರಾವ್‌ ಅವರಿಗೆ ಮಗಳ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲೂ ಸಂಕಷ್ಟ ಎದುರಾಗಿತ್ತು. ಇದೀಗ ಮಹಿಳೆಯರ ಜತೆ ಅಸಭ್ಯವಾಗಿ ವರ್ತನೆ ತೋರಿದ ಸಂಬಂಧ ಭಾರೀ ಟೀಕೆಗೆ ಗುರಿಯಾಗಿದ್ದಾರೆ. 

ವೈರಲ್ ಆಗಿರುವ ವಿಡಿಯೊಗಳಲ್ಲಿ ರಾಮಚಂದ್ರ ರಾವ್ ಅವರು ತಮ್ಮ ಕಚೇರಿಯಲ್ಲಿ, ಸಮವಸ್ತ್ರದಲ್ಲಿರುವಾಗಲೇ ಹಲವು ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರುವುದು ಇದಿಗ ಬೆಳಕಿಗೆ ಬಂದಿದೆ. ‌‌‌‌‌

ಮಾಡೆಲ್ ಒಬ್ಬರ ಜತೆ ಸರಸವಾಡಿರುವ ವಿಡಿಯೊ ವೈರಲ್‌ ಆಗಿದೆ. ಕಚೇರಿಗೆ ಕೆಲಸದ ನಿಮಿತ್ತ ಬರುವ ಮಹಿಳೆಯರ ಜತೆಗೂ ಈ ಅಧಿಕಾರಿ ಸರಸವಾಡುತ್ತಿದ್ದರು ಎನ್ನಲಾಗುತ್ತಿದ್ದು, ಅವರ ಕಾಮಕಾಂಡದ ವಿಡಿಯೊಗಳು ಈಗ ಹೊರಬಂದಿವೆ.

ಸಮಾಜದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕಿದ್ದ ಉನ್ನತ ಅಧಿಕಾರಿಯೇ ಅಸಭ್ಯವಾಗಿ ವರ್ತನೆ ತೋರಿರುವ ಬಗ್ಗೆ ಕಾನೂನು ಇಲಾಖೆಗೆಯೇ ಮುಜುಗರ ತಂದಿದೆ. ಈ ವರದಿಗಳು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ, ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿವೆ. ಈ ಅಧಿಕಾರಿಯ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿವೆ.


Share this Story:

Follow Webdunia kannada

ಮುಂದಿನ ಸುದ್ದಿ

ವೈರಲ್ ಆಗಬೇಕೆಂದು ಯುವತಿ ಮಾಡಿದ ವಿಡಿಯೋಗೆ ಅಮಾಯಕ ಯುವಕನ ಪ್ರಾಣವೇ ಹೋಯ್ತು video