Publish Date: Sat, 21 Jan 2017 (16:56 IST)
Updated Date: Sat, 21 Jan 2017 (17:04 IST)
ನಾಲ್ಕು ತಿಂಗಳ ಹಿಂದೆ ನಡೆದಿದ್ದ ಅತ್ಯಾಚಾರ ಪ್ರಕರಣವೊಂದರ ಆರೋಪಿ ಬಿಜೆಪಿ ನಾಯಕ ವೆಂಕಟೇಶ ಮೌರ್ಯರನ್ನು ಪೊಲೀಸರು ಬಂಧಿಸಿದ್ದಾರೆ.
ಕಲಬುರ್ಗಿಯಲ್ಲಿ ನಡೆದ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಎಸ್‌ಸಿ ಮೋರ್ಚಾ ಸದಸ್ಯ ವೆಂಕಟೇಶ ಮೌರ್ಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಾಲ್ಕು ತಿಂಗಳ ಹಿಂದೆ ನಡೆದಿದ್ದ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಆರೋಪದ ಮೇಲೆ ಮೌರ್ಯರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಪ್ರಕರಣ ಕುರಿತು ಬಂಧನ ಭೀತಿ ಎದುರಿಸುತ್ತಿದ್ದ ವೆಂಕಟೇಶ್ ಮೌರ್ಯ ತಲೆಮರೆಸಿಕೊಂಡು ತಿರುಗುತ್ತಿದ್ದರು.
ಬಿಜೆಪಿ ಕಾರ್ಯಕಾರಣಿ ಸಭೆಗೆ ವೆಂಕಟೇಶ್ ಮೌರ್ಯಾ ಬರುತ್ತಾರೆಂದು ಖಚಿತ ಮಾಹಿತಿ ಮೇಲೆ ಬೆಂಗಳೂರು ಪೊಲೀಸರು ಕಲಬುರ್ಗಿಗೆ ಆಗಮಿಸಿದ್ದು, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ