Select Your Language

Notifications

webdunia
webdunia
webdunia
webdunia

ಬೆಂಗಳೂರಲ್ಲಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ, ಐವರ ಬಂಧನ

ಬೆಂಗಳೂರಲ್ಲಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ, ಐವರ ಬಂಧನ
ಬೆಂಗಳೂರು , ಶುಕ್ರವಾರ, 21 ಜುಲೈ 2017 (09:25 IST)
ಉದ್ಯಾನ ನಗರಿ ಬೆಂಗಳೂರಿನಲ್ಲಿ ಮತ್ತೊಮ್ಮೆ ನಾಗರಿಕ ಸಮಾಜ ತಲೆತಗ್ಗಿಸುವಂತಾ ಘಟನೆ ನಡೆದಿದೆ. 11 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಯತ್ನ ನಡೆದಿದೆ.

ರಾಮಮೂರ್ತಿ ನಗರ ಠಾಣಾ ವ್ಯಾಪ್ತಿಯಲ್ಲಿ ಮನೆಗೆ ತೆರಳುತ್ತಿದ್ದ ಬಾಲಕಿಯನ್ನ ಬೆದರಿಸಿ ಕರೆದೊಯ್ದ ಐವರು ಕಾಮುಕರು ಸ್ನಶಾನದಲ್ಲಿ ಲೈಂಗಿಕ ಕಿರುಕುಳಕ್ಕೆ ಯತ್ನಿಸಿದ್ದಾರೆ. ಬಾಲಕಿ ಕಿರುಚಿಕೊಂಡಾಗ ಸುತ್ತಮುತ್ತಲಿನ ಜನರು ನೆರವಿಗೆ ಬಂದಿದ್ದಾರೆ. ಈ ಸಂದರ್ಭ ಕಾಮುಕರು ಬಾಲಕಿಯನ್ನ ಬಿಟ್ಟು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಐವರು ಬಾಲಾಪರಾಧಿಗಳನ್ನ ಬಂಧಿಸಿದ್ದಾರೆ.

ಮತ್ತೊಂದೆಡೆ ಇಂದಿರಾನಗರದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಓಲಾ ಆಟೋ ಚಾಲಕನನ್ನ ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನ ಮಂಜುನಾಥ್ ಎಂದು ಗುರ್ತಿಸಲಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಲಿಂಗಾಯುತ ಸ್ವತಂತ್ರ ಧರ್ಮ ಅನ್ನೋದು ಸರಿ: ಸಿಎಂ