Publish Date: Wed, 02 May 2018 (13:15 IST)
Updated Date: Wed, 02 May 2018 (13:17 IST)
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಅಪ್ರಾಪ್ತ ಬಾಲಕನನ್ನು ಗಲ್ಲಿಗೇರಿಸುವಂತೆ ಒತ್ತಾಯಿಸಿ ಮುಸ್ಲಿಂ ಸಮುದಾಯದ ಯುವಕರು ನಡೆಸುತ್ತಿದ್ದ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದಿದೆ.
ನಿನ್ನೆ ಹಿರಿಯೂರು ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 16 ವರ್ಷದ ಬಾಲಕನೊಬ್ಬ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಸಿಕ್ಕಿ ಬಿದ್ದಿದ್ದ.
ಈ ಸಂಬಂಧ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡ ಹಿರಿಯೂರು ಟೌನ್ ಠಾಣೆ ಪೊಲೀಸರು ಬಾಲಕನನ್ನು ವಶಕ್ಕೆ ಪಡೆದು ಚಿತ್ರದುರ್ಗಕ್ಕೆ ಕರೆತಂದಿದ್ರು. ಈ ವೇಳೆ ಅತ್ಯಾಚಾರ ಯತ್ನಕ್ಕೆ ಒಳಗಾಗಿ ಅಸ್ವಸ್ಥಗೊಂಡಿದ್ದ ಬಾಲಕಿಗೆ ಚಿಕಿತ್ಸೆ ನೀಡುತ್ತಿದ್ದ ಜಿಲ್ಲಾಸ್ಪತ್ರೆ ಬಳಿ ಜಮಾಯಿಸಿದ ನೂರಾರು ಸಂಖ್ಯೆಯ ಯುವಕರು ಆಸ್ಪತ್ರೆ ಬಳಿ ಜಮಾಯಿಸಿ ಆಂಬ್ಯುಲೆನ್ಸ್ ಮತ್ತು ಸರ್ಕಾರಿ ಬಸ್ಸುಗಳ ಮೇಲೆ ಕಲ್ಲು ತೂರಾಟ ನಡೆಸಿದರು.
ಪರಿಸ್ಥಿತಿ ನಿಯಂತ್ರಿಸುವ ಸಲುವಾಗಿ ಲಘು ಲಾಟಿ ಪ್ರಹಾರ ಮಾಡಿದ ಪೊಲೀಸರು ಘಟನೆಗೆ ಸಂಬಂಧ ಗಲಾಟೆಗೆ ಪ್ರಚೋದಿಸಿದ ಒಬ್ಬ ಮಹಿಳೆ ಸೇರಿದಂತೆ 35 ಜನರನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.