Select Your Language

Notifications

webdunia
webdunia
webdunia
webdunia

ಬಾಲಕಿ ಮೇಲೆ ಅತ್ಯಾಚಾರ ಯತ್ನ ಶಂಕೆ: ಥಳಿತ

Rape
ಗದಗ , ಶನಿವಾರ, 14 ಜುಲೈ 2018 (19:26 IST)
ಕುಡಿದ ಅಮಲಿನಲ್ಲಿ ನಾಲ್ಕುವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ಶಂಕಿಸಿ  ಯುವಕನೋರ್ವನನ್ನ ಹಿಗ್ಗಾ ಮುಗ್ಗಾ ಥಳಿಸಿರುವ ಘಟನೆ ಗದಗ ನಗರದಲ್ಲಿ ನಡೆದಿದೆ. ನಗರದ ಗಂಜಿಬಸವೇಶ್ವರ ಸರ್ಕಲ್ ಬಳಿ ರಾತ್ರಿ ವೇಳೆ ಎರಡು ಕುಟುಂಬಗಳ ನಡುವೆ ಗಲಾಟೆ ನಡೆದಿದೆ. ನಾಲ್ಕು ವರ್ಷದ ಬಾಲಕಿ ರಾತ್ರಿ ಮನೆ ಮುಂದೆ ಆಟವಾಡುತ್ತಿತ್ತು. ಸ್ಥಳಿಯ ಅಶೋಕ ಎಂಬ ಯುವಕ ಕುಡಿದ ಅಮಲಿನಲ್ಲಿ ಮಗುವನ್ನು ಎತ್ತಿಕೊಳ್ಳಲು ಮುಂದಾಗಿದ್ದಾನೆ.

ಬಾಲಕಿ ಅಳಲು ಪ್ರಾರಂಭಿಸಿದ್ದರಿಂದ ಕುಡಿದ ಅಮಲಿನಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆಂದು ಶಂಕಿಸಿ ಬಾಲಕಿ ಕುಟುಂಬದವರು ಅಶೋಕ ಎಂಬ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಥಳಿತಕ್ಕೊಳಗಾದ ಯುವಕನ ತಲೆಗೆ ತೀವ್ರ ಗಾಯವಾಗಿದೆ. ಕೆಲಕಾಲ ರಕ್ತಸ್ರಾವ ದಿಂದ ನರಳಾಡಿದ್ದಾನೆ. ಕೆಲಕಾಲ ಹೈಡ್ರಾಮಾ‌ ಸೃಷ್ಟಿಯಾಗಿತ್ತು. ನಂತರ ಆಸ್ಪತ್ರೆಗೆ ದಾಖಲಿಸಿ‌ ಚಿಕಿತ್ಸೆ ನೀಡಲಾಗಿದೆ. ಗದಗ ಶಹರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆಗೆ ಮುಂದಾಗಿದ್ದಾರೆ. ಪೊಲೀಸರು ಎರಡು ಕುಟುಂಬದವರಿಂದ ವಿಚಾರ‌ಣೆಗೆ ಮುಂದಾಗಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಧ್ಯಾಹ್ನದ ಬಿಸಿಯೂಟದಲ್ಲಿ ಹುಳು, ನುಸಿ ಪತ್ತೆ