Daily Horoscope

Select Your Language

Notifications

webdunia
webdunia
webdunia
webdunia

ಸ್ವಂತ ಮಾವನಿಂದಲೇ ಪುಟ್ಟ ಮಗುವಿನ ಮೇಲೆ ಅತ್ಯಾಚಾರಕ್ಕೆ ಯತ್ನ!

ಮಾವ
ಕುಡಿದ ಮತ್ತಿನಲ್ಲಿ ಸ್ವಂತ ಮಾವನೇ ಆಟವಾಡುತ್ತಿದ್ದ ಮೂರು ವರ್ಷದ ಮಗುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಹೇಯ ಕೃತ್ಯ ಮೈಸೂರು ಜಿಲ್ಲಿಯ ಎಚ್.ಡಿ.ಕೋಟೆ ತಾಲೂಕಿನ ಕುಂಟೇರಿಹಾಡಿಯಲ್ಲಿ ನಡೆದಿದೆ. 
 
ದೊಡ್ಡಹೈದ ಎಂಬಾತನೆ ಅತ್ಯಾಚಾರಕ್ಕೆ ಯತ್ನಿಸಿರುವ ಕಾಯುಕ. ಈತ ಕುಂಟೇರಿಹಾಡಿಯ ಆದಿವಾಸಿ ಕುಟುಂಬಕ್ಕೆ ಸೇರಿದ ಮೂರು ವರ್ಷದ ಮಗುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. 
 
ನಿನ್ನೆ ಮಧ್ಯಾಹ್ನ ಆಟವಾಡುತ್ತಿದ್ದ ಮಗುವನ್ನು ಕುಡಿದ ಮತ್ತಿನಲ್ಲಿದ್ದ ದೊಡ್ಡಹೈದ ಹುಣಸೇಮರದ ತೋಪಿಗೆ ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ. ಈ ಕುರಿತು ಮಗುವಿನ ಪೋಷಕರು ಎಚ್.ಡಿ.ಕೋಟೆ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 
 
ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗುತ್ತಿದ್ದಂತೆ ಆರೋಪಿ ದೊಡ್ಡಹೈದ ಪರಾರಿಯಾಗಿದ್ದು, ಮಗುವನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ತಿಳಿದುಬಂದಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಸಂಜೆ ಎಸ್.ಎಂ.ಕೃಷ್ಣ, ಚೆಲುವರಾಯಸ್ವಾಮಿ ಭೇಟಿ