Select Your Language

Notifications

webdunia
webdunia
webdunia
webdunia

ಅತ್ಯಾಚಾರ ಪ್ರಕರಣ, ಮತ್ತೇ ಪ್ರಜ್ವಲ್‌ ರೇವಣ್ಣಗೆ ಮೆಡಿಕಲ್‌ ಟೆಸ್ಟ್‌

Prajwal Revanna

sampriya

ಬೆಂಗಳೂರು , ಶನಿವಾರ, 15 ಜೂನ್ 2024 (18:16 IST)
ಬೆಂಗಳೂರು: ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದ್ದ 2ನೇ ಅತ್ಯಾಚಾರ ಪ್ರಕರಣಕ್ಕೆ ಸಂಬಂಧ ಆರೋಪಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್  ನಡೆಸಲಾಯಿತು.

ಮೂಲಗಳ ಪ್ರಕಾರ ವಿಡಿಯೋದಲ್ಲಿ ಕಾಣಿಸಿದ ಪುರುಷನ ಅಂಗಾಂಗಳೊಂದಿಗೆ ಪ್ರಜ್ವಲ್ ರೇವಣ್ಣ ಅಂಗಗಳನ್ನು ಹೋಲಿಕೆ ಮಾಡಲು ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ. ಅದಲ್ಲದೆ ಈ ಪರೀಕ್ಷೆಗೆ ಗುಜರಾತ್‍ನ ಅಹಮದಾಬಾದ್‍ನ ವಿಧಿ ವಿಜ್ಞಾನ ಪ್ರಯೋಗಾಲಯ ಹಾಗೂ ವಿದೇಶಿ ತಜ್ಞರ ನೆರವು ಪಡೆದುಕೊಳ್ಳುವ ಸಾಧ್ಯತೆಯಿದೆ.

ಈಗಾಗಲೇ ಎಸ್‍ಐಟಿ ಅಧಿಕಾರಿಗಳು ಆರೋಪಿಯ ಧ್ವನಿ ಮಾದರಿಯನ್ನು ಸಂಗ್ರಹಿಸಿದ್ದಾರೆ. ಅಶ್ಲೀಲ ವಿಡಿಯೋಗಳಲ್ಲಿನ ಮುಖ ಮರೆ ಮಾಚಿಕೊಂಡಿರುವ ವ್ಯಕ್ತಿಯ ಪತ್ತೆಗೆ ಅಂಗಾಂಗ ಪರೀಕ್ಷೆಗೆ ಎಸ್‍ಐಟಿ ಮುಂದಾಗಿದೆ ಎಂದು ತಿಳಿದುಬಂದಿದೆ.

ಮೊದಲನೇ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗೆ ವೈದ್ಯಕೀಯ ಪರೀಕ್ಷೆ ನಡೆದಿತ್ತು. ಇದೀಗ ದಾಖಲಾಗಿದ್ದ, 2ನೇ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್‍ಗೆ ವೈದ್ಯಕೀಯ ಪರೀಕ್ಷೆ ನಡೆದಿದೆ. ಪ್ರಜ್ವಲ್‍ಗೆ ವ್ಯದ್ಯಕೀಯ ಪರೀಕ್ಷೆ ಹಿನ್ನೆಲೆ ಬೌರಿಂಗ್ ಆಸ್ಪತ್ರೆ ಸುತ್ತ ಪೊಲೀಸ್ ಭದ್ರತೆ ನೀಡಲಾಗಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

28ರಂದು ಡಿ.ಸಿ.ಕಚೇರಿಗೆ ಮುತ್ತಿಗೆ-ಬಂಗಾರು ಹನುಮಂತು