Publish Date: Sat, 11 May 2024 (16:02 IST)
Updated Date: Sat, 11 May 2024 (16:06 IST)
ಬೆಂಗಳೂರು: ಮಹಿಳೆಯೊಬ್ಬರು ನೀಡಿದ ಲೈಂಗಿಕ ದೌರ್ಜನ್ಯ ದೂರಿನ ಸಂಬಂಧ ಬಂಧಿಯಾಗಿರುವ ವಕೀಲ, ಬಿಜೆಪಿ ಮುಖಂಡ ದೇವರಾಜೇಗೌಡ ಅವರನ್ನು ಪೊಲೀಸರು ಕಳೆದ ಒಂದು ಗಂಟೆಯಿಂದ ತೀವ್ರವಾದ ವಿಚಾರಣೆ ನಡೆಸುತ್ತಿದ್ದಾರೆ.
ಹೊಳೆನರಸೀಪುರದ ಕಚೇರಿಯಲ್ಲಿ ದೇವರಾಜೇಗೌಡ ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ.
ಪ್ರಕರಣದ ಬಗ್ಗೆ ದೇವರಾಜೇಗೌಡ ಅವರಲ್ಲಿ ಎಸ್ಪಿ ಮಹಮದ್ ಸುಜೇತಾ, ಎಎಸ್‌ಪಿ ವೆಂಕಟೇಶ್ ನಾಯ್ಡು, ಡಿವೈಎಸ್‌ಪಿ ಅಶೋಕ್ ಹಾಗೂ ಸರ್ಕಲ್ ಇನ್ಸ್‌ಪೆಕ್ಟರ್ ಸುರೇಶ್ ಕುಮಾರ್ ಪೊಲೀಸ್ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ಇನ್ನು ದೇವರಾಜೇಗೌಡ ವಿರುದ್ಧ ಕಳೆದ ಮಾರ್ಚ್‌ನಲ್ಲಿ ಹಾಸನ ನಗರ ಪೊಲೀಸ್ ಠಾಣೆಯಲ್ಲಿ ಹಾಗೂ 2017 ರಲ್ಲಿ ಕೆ.ಆರ್.ಪುರಂ ಪೊಲೀಸ್ ಠಾಣೆಯಲ್ಲಿ ದೇವರಾಜೇಗೌಡ ವಿರುದ್ಧ ದಾಖಲಾಗಿದ್ದ ಪ್ರಕರಣದ ವಿಚಾರಣೆ ನಡೆಸುತ್ತಿದ್ದಾರೆ.
ವಿಚಾರಣೆ ನಂತರ ಕೂಡಲೇ ದೇವರಾಜೇಗೌಡರನ್ನು ಕೆಲವೇ ಕ್ಷಣಗಳಲ್ಲಿ ಬಂಧನ ಸಾಧ್ಯತೆ ಇದೆ ಎಂದು ಹೇಳಲಾಗಿದೆ.