ಬೆಂಗಳೂರು: ಅತ್ಯಾಚಾರ ಪ್ರಕರಣ ಸಂಬಂಧ ಬಂಧಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಣೆ ಮಾಡಿದೆ.
ನಿರೀಕ್ಷಣಾ ಜಾಮೀನುಗಾಗಿ ಹೈಕೋರ್ಟ್ ಮೆಟ್ಟಿಲೇರಿದ್ದ ಪ್ರಜ್ವಲ್‌ಗೆ ಇದೀಗ ಕಾನೂನಿನ ಅಡಿಯಲ್ಲಿ ಹಿನ್ನೆಡೆಯಾಗಿದೆ.
ಅತ್ಯಾಚಾರ ಪ್ರಕರಣ ಸಂಬಂಧ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಂದು (ಅಕ್ಟೋಬರ್ 21) ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿದೆ.
ಹಾಸನದ ಮೂಲದ ಮಹಿಳೆಯೊಬ್ಬರು ಪ್ರಜ್ವಲ್ ರೇವಣ್ಣ ವಿರುದ್ಧ ಬೆಂಗಳೂರಿನ ಸೈಬರ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಿದ್ದರು.
ಈ ಪ್ರಕರಣದ ಸಂಬಂಧ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ಜಾಮೀನು ನೀಡಲು ನಿರಾಕರಿಸಿದೆ.