Select Your Language

Notifications

webdunia
webdunia
webdunia
webdunia

ಪ್ರಜ್ವಲ್ ರೇವಣ್ಣ ವಿರುದ್ಧ ರೇಪ್ ಕೇಸ್ ದಾಖಲು

Prajwal Revanna
ಬೆಂಗಳೂರು: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದಲ್ಲಿ ಸಿಲುಕಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಹೊಸದಾಗಿ ಅತ್ಯಾಚಾರ ಪ್ರಕರಣ ದಾಖಲಾಗಿದೆ.

ಇದು ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾದ ಮತ್ತೊಂದು ಹೊಸ ಪ್ರಕರಣವಾಗಿದೆ. ಪ್ರಜ್ವಲ್ ರೇವಣ್ಣ ರಾಸಲೀಲೆಯ ವಿಡಿಯೋದಲ್ಲಿದ್ದ ಮಹಿಳೆಯರಿಗೆ ಧೂರು ಸಲ್ಲಿಸಲು ಎಸ್ಐಟಿ ಮನವಿ ಮಾಡಿತ್ತು. ಅದರಂತೆ ಓರ್ವ ಮಹಿಳೆ ನಿನ್ನೆ ದೂರು ನೀಡಿದ್ದರು.

ಇದೀಗ ಅದರಂತೆ ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಜ್ವಲ್ ರೇವಣ್ಣ ಹಲವು ಆಮಿಷವೊಡ್ಡಿ ಅತ್ಯಾಚಾರವೆಸಗಿದ್ದಾರೆ ಎಂದು ನ್ಯಾಯಾಧೀಶರ ಮುಂದೆ ಮಹಿಳೆ ಹೇಳಿಕೊಂಡಿದ್ದಾರೆ. ಆದರೆ ಸಂತ್ರಸ್ತೆಯ ಮಾಹಿತಿಯ ಗೌಪ್ಯವಾಗಿರಿಸಲಾಗಿದೆ.

ಇದರೊಂದಿಗೆ ಈ ಪ್ರಕರಣ ಮತ್ತಷ್ಟು ಸ್ಟ್ರಾಂಗ್ ಆಗಿದೆ. ಇಂತಹ ಆರೋಪ ಸಾಬೀತಾದರೆ ಅಪರಾಧಿಗೆ 7 ವರ್ಷದವರೆಗೆ ಕಠಿಣ ಶಿಕ್ಷೆ ವಿಧಿಸಬಹುದಾಗಿದೆ. ತಮ್ಮ ಮನೆಯ ಕೆಲಸದಾಕೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಪ್ರಜ್ವಲ್ ರೇವಣ್ಣ ಮತ್ತು ತಂದೆ ಎಚ್ ಡಿ ರೇವಣ್ಣ ವಿರುದ್ಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಮೊದಲ ದೂರು ದಾಖಲಾಗಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ರಾಹುಲ್ ಗಾಂಧಿ ರಾಯ್ ಬರೇಲಿಯಿಂದ ಸ್ಪರ್ಧೆ ಖಚಿತ, ಅಮೇಠಿಗೆ ಪ್ರಿಯಾಂಕ ಸಾಧ್ಯತೆ