Select Your Language

Notifications

webdunia
webdunia
webdunia
webdunia

ಅತ್ಯಾಚಾರ ಪ್ರಕರಣ: ವಿಶ್ವವಿದ್ಯಾಲಯದ ಚಾನ್ಸಲರ್ ಬಂಧನ

ಅತ್ಯಾಚಾರ ಪ್ರಕರಣ: ವಿಶ್ವವಿದ್ಯಾಲಯದ ಚಾನ್ಸಲರ್ ಬಂಧನ
ಬೆಂಗಳೂರು , ಶನಿವಾರ, 6 ಫೆಬ್ರವರಿ 2016 (09:19 IST)
ನಗರದ ಪ್ರತಿಷ್ಠಿತ ವಿಶ್ವವಿದ್ಯಾಲಯದ ಚಾನ್ಸಲರ್ ಆಗಿರುವ ಡಾಕ್ಟರ್. ಮಧುಕರ್ ಜಿ ಅಂಗೂರ್ ಅವರ ವಿರುದ್ಧ ಅತ್ಯಾಚಾರದ ಆರೋಪ ಕೇಳಿ ಬಂದಿದೆ. 

ತಮ್ಮ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೋರ್ವರ ಮೇಲೆ ಅವರು ನಿರಂತರ ಅತ್ಯಾಚಾರವೆಸಗಿದ್ದಾರೆಂದು ಮಡಿವಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಅಂಗೂರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
 
ಪೀಡಿತ ಮಹಿಳೆ ಮೇಲೆ ಅನೇಕ ಬಾರಿ ಅತ್ಯಾಚಾರ ಎಸಗಿದ್ದ ಅಂಗೂರ್ ಅವರು ವಿಷಯವನ್ನು ಬಹಿರಂಗ ಪಡಿಸದಂತೆ ಒತ್ತಡ ಹೇರಿದ್ದರು ಎನ್ನಲಾಗಿದೆ. ಹೀಗಾಗಿ ಮಾನಸಿಕ ಖಿನ್ನತೆಗೆ ಜಾರಿದ್ದ ಮಹಿಳೆಯ ತಾಯಿ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ.
 
ತಕ್ಷಣ ಪೀಡಿತಳ ತಾಯಿ ಮಡಿವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Share this Story:

Follow Webdunia kannada