Webdunia - Bharat's app for daily news and videos

Install App

9 ವರ್ಷದ ಬಾಲಕಿ ಮೇಲೆ ನೆರೆಮನೆಯವನಿಂದ ಅತ್ಯಾಚಾರ

Webdunia
ಮಂಗಳವಾರ, 11 ನವೆಂಬರ್ 2014 (13:36 IST)
9 ವರ್ಷದ ಬಾಲಕಿಯ  ಮೇಲೆ ಮಂಜುನಾಥ್ ಎಂಬವ ಅತ್ಯಾಚಾರ ಮಾಡಿದ ಘಟನೆ ಬೆಂಗಳೂರಿನ ರಾಜಗೋಪಾಲನಗರದಲ್ಲಿ ನಡೆದಿದೆ. ನೆರಮನೆಯವನಾದ ಮಂಜುನಾಥ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ   ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದಾನೆ.

ಮಗುವಿನ ತಂದೆ ಮತ್ತು ತಾಯಿ ಇಬ್ಬರೂ ಕೆಲಸಕ್ಕೆ ಹೋಗಿದ್ದು, ಬಾಲಕಿ ಒಂಟಿಯಾಗಿದ್ದಾಗ ಮನೆಗೆ ನುಗ್ಗಿ ಅತ್ಯಾಚಾರವೆಸಗಿದ್ದಾನೆ. ಮಂಜುನಾಥ್ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದು, ಕೆಲಸದಿಂದ ಹಿಂತಿರುಗಿದ ಬಳಿಕ ಅವನನ್ನು ಕಂಬಕ್ಕೆ ಕಟ್ಟಿ ಹಾಕಿ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿದರು. ಮಂಜುನಾಥ್‌ನನ್ನು ಪೊಲೀಸರು ಬಂಧಿಸಿ ತನಿಖೆ ನಡೆಸಿದ್ದಾರೆ. 
 
 ಬಾಲಕಿಯ ಮೇಲೆ ಅತ್ಯಾಚಾರ  
ಮನೆಯವರ ಜೊತೆ ಮುನಿಸಿಕೊಂಡು ಮೈಸೂರಿಗೆ ಬಂದ ಬಾಲಕಿಯ ಮೇಲೆ ರೈಲಿನಲ್ಲಿ ಕಾಮುಕನೊಬ್ಬ ಅತ್ಯಾಚಾರ ಮಾಡಿದ ಘಟನೆ ಸಂಭವಿಸಿದೆ. ರೈಲಿನಲ್ಲಿ ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಬಾಲಕಿಯ ಜೊತೆ ಸ್ನೇಹ ಸಂಪಾದಿಸಿದ ಯುವಕನೊಬ್ಬ ಬಾಲಕಿಯ ಮೇಲೆ ಚಲಿಸುತ್ತಿದ್ದ ರೈಲಿನಲ್ಲೇ ಅತ್ಯಾಚಾರವೆಸಗಿದ. ಮಂಡ್ಯದ ಪಾಂಡವಪುರದ ಬಳಿ ಅತ್ಯಾಚಾರವೆಸಗಿದ್ದಾನೆಂದು ಬಾಲಕಿ ದೂರಿನಲ್ಲಿ ತಿಳಿಸಿದ್ದಾಳೆ. ಬಾಲಕಿ ತೀರಾ ಅಸ್ವಸ್ಥಳಾಗಿ ಕಂಡುಬಂದು,  ಚಿಕಿತ್ಸೆ ನೀಡಲಾಗುತ್ತಿದ್ದು, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments