Select Your Language

Notifications

webdunia
webdunia
webdunia
Friday, 4 April 2025
webdunia

ವಿದ್ಯಾರ್ಥಿನಿ ಮೇಲೆ ಸತತವಾಗಿ ಪ್ರಾಧ್ಯಾಪಕನಿಂದ ರೇಪ್‌!

ಲೈಂಗಿನ ದೌರ್ಜನ್ಯ
ಹಾವೇರಿ , ಮಂಗಳವಾರ, 7 ಜೂನ್ 2022 (16:02 IST)
ಹಾವೇರಿ :  ಬಿ.ಕಾಂ ಅಂತಿಮ ವರ್ಷದ ವಿದ್ಯಾರ್ಥಿನಿ ಮೇಲೆ ಸಹಾಯಕ ಪ್ರಾಧ್ಯಾಪಕರೊಬ್ಬರು ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂಬ ಆರೋಪವೊಂದು ಕೇಳಿ ಬಂದ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಬಂಕಾಪುರ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು(ಮಂಗಳವಾರ) ನಡೆದಿದೆ. 

ಬಂಕಾಪುರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕನ ವಿರುದ್ಧ ಗಂಭೀರವಾದ ಆರೋಪ ಕೇಳಿ ಬಂದಿದೆ. ನಿಂಗಪ್ಪ ಕಲಕೋಟಿ ಎಂಬುವವರು ಬಿ.ಕಾಂ ಅಂತಿಮ ವರ್ಷದ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.

ಮನೆಯಲ್ಲಿ ಪಾಠ ಹೇಳಿಕೊಡುವುದಾಗಿ ಮನೆಗೆ ಕರೆಯಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಒಂದೂವರೆ ವರ್ಷಗಳಿಂದ ನಿಂಗಪ್ಪ ಕಲಕೋಟಿ ವಿದ್ಯಾರ್ಥಿನಿ ಮೇಲೆ ಏಳೆಂಟು ಬಾರಿ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಆರೋಪಿಸಲಾಗಿದೆ.

ಲೈಂಗಿನ ದೌರ್ಜನ್ಯ ಎಸಗಿದ್ದಲ್ಲದೆ ನಿಂಗಪ್ಪ ಕಲಕೋಟಿ ವಿದ್ಯಾರ್ಥಿನಿಗೆ ಜೀವ ಬೆದರಿಕೆ ಹಾಕಿದ್ದಾರೆ. ಆರೋಪಿ ನಿಂಗಪ್ಪ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂಗ್ಲಿಷ್ ಸಹಾಯಕ ಪ್ರಾಧ್ಯಾಪಕನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ನಿಂಗಪ್ಪ ಎಸಗಿದ ಕೃತ್ಯದಿಂದ ಕಾಲೇಜು ವಿದ್ಯಾರ್ಥಿನಿ ಇದೀಗ ಮೂರು ತಿಂಗಳ ಗರ್ಭಿಣಿಯಾಗಿದ್ದಾಳೆ.

 


Share this Story:

Follow Webdunia kannada

ಮುಂದಿನ ಸುದ್ದಿ

ನಿತ್ಯಾನಂದ ಸ್ವಾಮಿ ರೇಪ್ ಕೇಸ್ ರೀಓಪನ್..!