Daily Horoscope
✕

ವಿದ್ಯಾರ್ಥಿನಿ ಮೇಲೆ ಸತತವಾಗಿ ಪ್ರಾಧ್ಯಾಪಕನಿಂದ ರೇಪ್‌!

Webdunia
ಮಂಗಳವಾರ, 7 ಜೂನ್ 2022 (16:02 IST)
ಹಾವೇರಿ :  ಬಿ.ಕಾಂ ಅಂತಿಮ ವರ್ಷದ ವಿದ್ಯಾರ್ಥಿನಿ ಮೇಲೆ ಸಹಾಯಕ ಪ್ರಾಧ್ಯಾಪಕರೊಬ್ಬರು ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂಬ ಆರೋಪವೊಂದು ಕೇಳಿ ಬಂದ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಬಂಕಾಪುರ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು(ಮಂಗಳವಾರ) ನಡೆದಿದೆ. 

ಬಂಕಾಪುರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕನ ವಿರುದ್ಧ ಗಂಭೀರವಾದ ಆರೋಪ ಕೇಳಿ ಬಂದಿದೆ. ನಿಂಗಪ್ಪ ಕಲಕೋಟಿ ಎಂಬುವವರು ಬಿ.ಕಾಂ ಅಂತಿಮ ವರ್ಷದ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.

ಮನೆಯಲ್ಲಿ ಪಾಠ ಹೇಳಿಕೊಡುವುದಾಗಿ ಮನೆಗೆ ಕರೆಯಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಒಂದೂವರೆ ವರ್ಷಗಳಿಂದ ನಿಂಗಪ್ಪ ಕಲಕೋಟಿ ವಿದ್ಯಾರ್ಥಿನಿ ಮೇಲೆ ಏಳೆಂಟು ಬಾರಿ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಆರೋಪಿಸಲಾಗಿದೆ.

ಲೈಂಗಿನ ದೌರ್ಜನ್ಯ ಎಸಗಿದ್ದಲ್ಲದೆ ನಿಂಗಪ್ಪ ಕಲಕೋಟಿ ವಿದ್ಯಾರ್ಥಿನಿಗೆ ಜೀವ ಬೆದರಿಕೆ ಹಾಕಿದ್ದಾರೆ. ಆರೋಪಿ ನಿಂಗಪ್ಪ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂಗ್ಲಿಷ್ ಸಹಾಯಕ ಪ್ರಾಧ್ಯಾಪಕನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ನಿಂಗಪ್ಪ ಎಸಗಿದ ಕೃತ್ಯದಿಂದ ಕಾಲೇಜು ವಿದ್ಯಾರ್ಥಿನಿ ಇದೀಗ ಮೂರು ತಿಂಗಳ ಗರ್ಭಿಣಿಯಾಗಿದ್ದಾಳೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ವಿರುದ್ಧ ಸ್ಟಿಂಜ್ ಆಪರೇಷನ್ ಮಾಡಿದ್ದು ಯಾರು, ಯಾಕೆ: ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಯತೀಂದ್ರ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ

ಇದಪ್ಪಾ ಲಾಟರಿ ಅಂದ್ರೆ.. 7 ರೂ ಖರ್ಚು ಮಾಡಿ 1 ಕೋಟಿ ಜಾಕ್ ಪಾಟ್ ಗೆದ್ದ ಮಹಿಳೆ Video

ಅನಂತ ಅಂಬಾನಿ ಒಳ್ಳೆತನಕ್ಕೆ ಇದೇ ಸಾಕ್ಷಿ… 9 ಲಕ್ಷ ಅನಾಥ ಹಸುಗಳಿಗೆ ಆಶ್ರಯ, ಮನೆಯಲ್ಲೇ 6 ಹಸುಗಳಿಗೆ ತಾಣ

ಎಷ್ಟು ಧೈರ್ಯ… ಡ್ಯೂಟಿಯಲ್ಲಿರುವ ಮಹಿಳಾ ವೈದ್ಯೆಯ ಕೆನ್ನೆಗೆ ಹೊಡೆದ ವ್ಯಕ್ತಿ Video

ಮುಂದಿನ ಸುದ್ದಿ