Publish Date: Wed, 07 Feb 2018 (06:44 IST)
Updated Date: Wed, 07 Feb 2018 (06:47 IST)
ಮೈಸೂರು : ಕಾಮುಕನೊಬ್ಬ 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಘಟನೆಯೊಂದು ಬೆಳಕಿಗೆ ಬಂದಿದೆ.
ದೊಡ್ಡಹೈದ (29) ಅತ್ಯಾಚಾರ ಎಸಗಿದ ಆರೋಪಿ. ಮಗುವಿನ ತಾಯಿಯ ದೂರದ ಸಂಬಂಧಿಯಾಗಿರುವ ಈತ ಆಟವಾಡಿಸುವುದಾಗಿ ಹೇಳಿ ನಿರ್ಜನ ಪ್ರದೇಶವಾದ ಹೆಚ್.ಡಿ.ಕೋಟೆ ತಾಲೂಕಿನ ಹಾಡಿಯೊಂದಕ್ಕೆ ಮಗುವನ್ನು ಕರೆದೊಯ್ದು ಈ ಕೃತ್ಯವೆಸಗಿದ್ದಾನೆ.
ಮಹಿಳೆಯೊಬ್ಬರು ಈತ ಮಗುವಿನ ಜೊತೆ ಅಸಭ್ಯವಾಗಿ ವರ್ತಿಸುವುದನ್ನು ಕಂಡು ಸ್ಥಳಕ್ಕೆ ಬಂದಾಗ ಈ ಕೃತ್ಯ ಬೆಳಕಿಗೆ ಬಂದಿದೆ. ಮಗುವಿನ ಮೇಲೆ ಅತ್ಯಾಚಾರವಾಗಿರುವುದು ವೈದ್ಯಕೀಯ ವರದಿಯಲ್ಲಿಯೂ ಕೂಡ ತಿಳಿದುಬಂದಿದ್ದರಿಂದ ಫೋಕ್ಸೋ ವಿಶೇಷ ನ್ಯಾಯಾಲಯ ಆರೋಪಿಗೆ 10 ವರ್ಷಗಳ ಕಾಲ ಕಠಿಣ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ ದಂಡ ವಿಧಿಸಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ