Select Your Language

Notifications

webdunia
webdunia
webdunia
webdunia

ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಅತ್ಯಾಚಾರ: ಗ್ಯಾಂಗ್‌ ರೇಪ್ ಆರೋಪದ ಬಗ್ಗೆ ಎಸ್ಪಿ ಏನಂದ್ರು ಗೊತ್ತಾ

Karkala Hindu Girl Rape Case

Sampriya

ಉಡುಪಿ , ಶನಿವಾರ, 24 ಆಗಸ್ಟ್ 2024 (15:13 IST)
Photo Courtesy X
ಉಡುಪಿ: ಕಾರ್ಕಳದಲ್ಲಿ ಹಿಂದೂ ಯುವತಿಯನ್ನು ಕಿಡ್ಯಾಪ್ ಮಾಡಿ ಆಕೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್ ಅವರು ವಿವರಿಸಿ, ಒಬ್ಬನಿಂದಲೇ ಅತ್ಯಾಚಾರ ನಡೆದಿದೆ ಎಂದು ಸ್ಪಷ್ಟನೆ ನೀಡಿದರು.

ಕಾರ್ಕಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನ ಅತ್ಯಾಚಾರ ಪ್ರಕರಣ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಹಿಂದೂ ಕಾರ್ಯಕರ್ತರು ಈ ಪ್ರಕರಣ ಸಂಬಂಧ ಆಕ್ರೋಶ ಹೊರಹಾಕಿ, ಹಿಂದೂ ಯುವತಿಯರನ್ನು ಟಾರ್ಗೇಟ್ ಮಾಡಿ ಕೃತ್ಯ ಎಸೆಯಲಾಗುತ್ತಿದೆ. ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದಾರೆ.

ಈ ಪ್ರಕರಣ ಸಂಬಂಧ ವಿವರಣೆ ನೀಡಿದ ನೀಡಿದ ಎಸ್ಪಿ ಅವರು, ಕಾರ್ಕಳ ಠಾಣಾ ವ್ಯಾಪ್ತಿಯಲ್ಲಿ ಯುವತಿಯನ್ನು ಅಪಹರಿಸಿ ಅತ್ಯಾಚಾರ ದೂರು ಬಂದಿದೆ. ಮೂರು ತಿಂಗಳ ಹಿಂದೆ ಆರೋಪಿಯು ಯುವತಿಯನ್ನು ಇನ್‌ಸ್ಟಾಗ್ರಾಂ ಮೂಲಕ ಪರಿಚಯ ಮಾಡಿಕೊಂಡಿದ್ದಾನೆ.

ಶುಕ್ರವಾರ ಆರೋಪಿ ಅಲ್ತಾಫ್ ಕರೆ ಮಾಡಿ ಸಂತ್ರಸ್ತೆಗೆ ಬರಲು ಹೇಳಿದ್ದ. ಆಕೆ ಬಂದಾಗ ಅಲ್ಲಿಂದ ಅಪಹರಿಸಿದ್ದ. ಮಧ್ಯದಲ್ಲಿ ಏನನ್ನೊ ಬೆರೆಸಿ ಅತ್ಯಾಚಾರ ಎಸಗಿರುವುದಾಗಿ ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.

 ಇನ್ನೂ ಅತ್ಯಾಚಾರ ಒಬ್ಬನೇ ಎಸಗಿದ್ದು, ಆತನಿಗೆ ಇಬ್ಬರು ಸಹಾಯ ಮಾಡಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಆರೋಪಿ ಅಲ್ತಾಫ್‌ ಹಾಗೂ ಆತನಿಗೆ ಸಹಾಯ ಮಾಡಿದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಪ್ರಧಾನಿ ಮೋದಿ, ಸಿಎಂ ಯೋಗಿ ಹೊಗಳಿದ್ದಕ್ಕೆ ಪತ್ನಿಗೆ ಈ ಅವಸ್ಥೆ ತಂದಿಟ್ಟ ಪತಿ