Select Your Language

Notifications

webdunia
webdunia
webdunia
webdunia

ಹಿಂದೂ ಯುವತಿ ಮೇಲೆ ಅತ್ಯಾಚಾರ: ದೇಶಕ್ಕೆ ಕಾರ್ಕಳದ ತೀರ್ಪು ಇತಿಹಾಸವಾಗುವಂತಿರಬೇಕು

R Ashok

Sampriya

ಬೆಂಗಳೂರು , ಭಾನುವಾರ, 25 ಆಗಸ್ಟ್ 2024 (11:03 IST)
Photo Courtesy X
ಬೆಂಗಳೂರು: ಕಾರ್ಕಳದಲ್ಲಿ ಹಿಂದೂ ಯುವತಿಗೆ ಮಾದಕ ದ್ರವ್ಯ ನೀಡಿ ಗ್ಯಾಂಗ್ ರೇಪ್ ಮೂಲಕ ಅಟ್ಟಹಾಸ ಮೆರೆದ ವಿಕೃತ ಮನಸ್ಥಿತಿಯ ಅತ್ಯಾಚಾರಿಗಳನ್ನು ಶೀಘ್ರದಲ್ಲೇ ಗಲ್ಲಿಗೇರಿಸಿ ಎಂದು ವಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹಿಸಿದ್ದಾರೆ.

ಕಾರ್ಕಳದಲ್ಲಿ ಹಿಂದೂ ಯುವತಿಯನ್ನು ಮುಸ್ಲಿಂ ಹುಡುಗ ಕರೆಸಿಕೊಂಡು, ಅಮಲು ಪದಾರ್ಥ ನೀಡಿ ಅತ್ಯಾಚಾರ ಎಸಗಿದ ಬಗ್ಗೆ ಕಠಿಣ ಕ್ರಮಕ್ಕೆ ಹಿಂದೂ ಪರ ಸಂಘಟನಗೆಳ ಒತ್ತಾಯ ಮಾಡುತ್ತಿದೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಪ್ರಕರಣ ಸಂಬಂಧ ಕಠಿಣ ಕ್ರಮಕ್ಕೆ ವಿಪಕ್ಷ ನಾಯಕ ಆರ್‌.ಅಶೋಕ್ ಒತ್ತಾಯಿಸಿದ್ದಾರೆ.

ಹಿಂದೂ ಹೆಣ್ಣು ಮಕ್ಕಳಿಗೆ ರಕ್ಷಣೆ ನೀಡದ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ

ಕಾಂಗ್ರೆಸ್ ನ ಓಲೈಕೆ ರಾಜಕಾರಣದಿಂದಾಗಿ ಸಮಾಜಘಾತುಕ ಶಕ್ತಿಗಳಿಗೆ ರಾಜ್ಯದಲ್ಲಿ ಕಾನೂನಿನ ಭಯವೇ ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಮಹಿಳೆಯರು ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರ, ದೌರ್ಜನ್ಯ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದೆ.

ಕಾರ್ಕಳದಲ್ಲಿ ಹಿಂದೂ ಯುವತಿಯನ್ನು ಅಲ್ತಾಫ್‌ ಎಂಬ ದುರುಳ ತನ್ನ ದುಷ್ಟಗ್ಯಾಂಗ್ ನೊಂದಿಗೆ ಅಪಹರಿಸಿ ಮಾದಕ ದ್ರವ್ಯ ನೀಡಿ ಗ್ಯಾಂಗ್ ರೇಪ್ ನಡೆಸಿರುವ ಅಮಾನುಷ ಘಟನೆ ರಾಜ್ಯದ ಜನತೆಯನ್ನು ಬೆಚ್ಚಿ ಬೀಳಿಸಿದೆ.

ಕಾಂಗ್ರೆಸ್ ಸರ್ಕಾರ ಈಗಲಾದರೂ ಎಚ್ಚೆತ್ತುಕೊಂಡು ರಾಜ್ಯದ ಹೆಣ್ಣು ಮಕ್ಕಳು, ಮಹಿಳೆಯರಿಗೆ ಸುರಕ್ಷತೆಯ ಗ್ಯಾರೆಂಟಿ ನೀಡುತ್ತದೋ ಅಥವಾ ತಮ್ಮ 'ಬ್ರದರ್‌' ಗಳ ರಕ್ಷಣೆಗೆ ನಿಲ್ಲುತ್ತದೋ ನೋಡಬೇಕು.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಮಾಜಿ ಸಿಎಂ ಅಶ್ಲೀಲ ವಿಡಿಯೋ ಬಗ್ಗೆ ಹೊಸ ಬಾಂಬ್ ಸಿಡಿಸಿದ ಆನಂದ ನ್ಯಾಮಗೌಡ