Publish Date: Wed, 14 Nov 2018 (19:20 IST)
Updated Date: Wed, 14 Nov 2018 (19:22 IST)
ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ 28 ವರ್ಷದ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ.
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಉಮತಾರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರಮೇಶ ಮಡ್ಡೆಪ್ಪ ಮಾದರ(28) ಅತ್ಯಾಚಾರ ಎಸಗಿದ ವ್ಯಕ್ತಿ ಎನ್ನಲಾಗಿದೆ. ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಸಂಜೆ ವೇಳೆಯಲ್ಲಿ ಮನೆಯಲ್ಲಿ ಆಟವಾಡುತ್ತಿದ್ದ ಬಾಲಕಿಯನ್ನು ಕಂಡ ಆರೋಪಿ ರಮೇಶ್, ಯಾರು ಇಲ್ಲದಿರುವದನ್ನು ಗಮನಿಸಿ ಬಾಲಕಿಯ ಮೇಲೆ ಅಚ್ಯಾಚಾರ ಎಸಗಿದ್ದಾನೆ. ಬಾಲಕಿ ಚಿರಿಕೊಂಡಿದ್ದರಿಂದ ಪಕ್ಕದ ಮನೆಯಲ್ಲಿದ್ದ ಬಾಲಕಿಯ ಸಹೋದರ ಮಾವ ಓಡಿ ಬರುವಷ್ಟರಲ್ಲಿ ಈ ವ್ಯಕ್ತಿ ಪರಾರಿಯಾಗಿದ್ದಾನೆ.
ತಕ್ಷಣ ಬಾಲಕಿಯ ತಾಯಿ ರಾಮದುರ್ಗ ಠಾಣೆಗೆ ಆಗಮಿಸಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.
ಅತ್ಯಾಚಾರಕ್ಕೆ ಒಳಗಾದ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ.