Select Your Language

Notifications

webdunia
webdunia
webdunia
webdunia

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ !

ಆಟೋ
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ಪಟ್ಟಣದಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಆಟೋದಲ್ಲಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
 
ತಾಲೂಕಿನ ಕೋನಳ್ಳಿಯ ನಿವಾಸಿ ಅಖಿಲ್ ಈಶ್ವರ ಅಡಿಗುಂಡಿ (20) ಹಾಗೂ ಹೊನ್ನಾವರ ಕಡತೋಕಾದ ಹೆಬ್ಳೆಕೊಪ್ಪ ನಿವಾಸಿ ಸಮರ್ಥ ಜಟ್ಟಿ ಮುಕ್ರಿ (20) ಬಂಧಿತರು.

ಈ ಇಬ್ಬರು ಸೇರಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದು, ಇದರಿಂದಾಗಿ ವಿದ್ಯಾರ್ಥಿನಿ ಗರ್ಭಿಣಿ ಆಗಿದ್ದಾಳೆ.

ವಿದ್ಯಾರ್ಥಿನಿಯು ಗರ್ಭಿಣಿಯಾಗಿರುವ ವಿಷಯ ತಿಳಿದ ಕುಟುಂಬ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಬಾಲಕಿಯ ಹೇಳಿಕೆ ಆಧರಿಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಸಿಟಿ ರವಿ ಹೇಳಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರ ಧರಣಿ