ಮನೆ ಮಾಲೀಕನಿಂದಲೇ ಅಪ್ರಾಪ್ತ ಬಾಲೆಯ ಮೇಲೆ ಅತ್ಯಾಚಾರ

Webdunia
ಶನಿವಾರ, 26 ಆಗಸ್ಟ್ 2017 (12:53 IST)
ಕಾಮುಕ ಕ್ರಿಮಿಗಳ ಅಟ್ಟಹಾಸಕ್ಕೆ ಕೊನೆಯಿಲ್ಲದಂತಾಗಿದೆ. ಮನೆಯ ಮಾಲೀಕನೊಬ್ಬ ಅಪ್ರಾಪ್ತ ಬಾಲೆಯ ಮೇಲೆ ಅತ್ಯಾಚಾರವೆಸಗಿದ ಹೃದಯ ವಿದ್ರಾವಕ ಘಟನೆ ವರದಿಯಾಗಿದೆ.
ಆಗಸ್ಟ್ 17 ರಂದು ಆರೋಪಿ ಮಾಲೀಕ, ಮನೆಯಲ್ಲಿ ಐದು ವರ್ಷದ ಬಾಲಕಿ ಏಕಾಂಗಿಯಾಗಿದ್ದಾಗ ಆಕೆಯ ಮೇಲೆ ಅತ್ಯಾಚಾರೆವೆಸಗಿದ್ದನು. ಗಂಭೀರ ಗಾಯಗಳಿಂದ ಬಳಲುತ್ತಿದ್ದ ಬಾಲೆ ಅರೆಪ್ರಜ್ಞಾವಸ್ಥೆಯಲ್ಲಿದ್ದಳು ಎಂದು ಪೊಲೀಸ್ ಮೂಲಗಳು ತಿಳಿಸಿವೆ.  
 
ನಂತರ ಪೋಷಕರು ಬಾಲೆಯನ್ನು ಸೇಂಟ್‌ಜಾನ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಇಂದು ಸಾವನ್ನಪ್ಪಿದ್ದಾಳೆ. ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಆಸ್ಪತ್ರೆಗೆ ಭೇಟಿ ನೀಡಿ ತನಿಖೆಯನ್ನು ನಡೆಸಿದ್ದಾರೆ.
 
ನಗರದ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.    

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments