ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ; ಆರೋಪಿ ಚಿಕ್ಕಪ್ಪಗೆ ಜೈಲು ಶಿಕ್ಷೆ

Webdunia
ಶನಿವಾರ, 23 ಫೆಬ್ರವರಿ 2019 (17:45 IST)
ಅಪ್ರಾಪ್ತ ವಯಸ್ಸಿನ ಮಗಳ ಮೇಲೆಯೇ ಅತ್ಯಾಚಾರವೆಸಗಿದ ಆರೋಪಿ ಚಿಕ್ಕಪ್ಪನಿಗೆ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ.

 ಮಂಗಳೂರಿನ ಎರಡನೇ ಹೆಚ್ಚುವರಿ ನ್ಯಾಯಾಲಯ ಮತ್ತು ಪೋಕ್ಸೊ ವಿಶೇಷ ನ್ಯಾಯಾಲಯ ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ ಮತ್ತು 10 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ. ಮಂಗಳೂರಿನ ಗೌರಿಮಠ ಬಳಿಯ ನಿವಾಸಿ ಚಂದ್ರಕಾಂತ್(45) ಶಿಕ್ಷೆಗೊಳಗಾದ ಆರೋಪಿ. 2018ರ ಮೇ 2ರಂದು ಪ್ರಕರಣ ನಡೆದಿದ್ದು, ಕ್ಷಿಪ್ರವಾಗಿ ವಿಚಾರಣೆ ನಡೆಸಿದ ನ್ಯಾಯಾಲಯ 9 ತಿಂಗಳಿನಲ್ಲಿಯೇ ಆರೋಪಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಆರೋಪಿಗೆ ಐಪಿಸಿ ಸೆಕ್ಷನ್ 376 ಮತ್ತು ಪೊಕ್ಸೋ ಕಾಯ್ದೆಯ ಸೆಕ್ಷನ್ 6ರ ಅಡಿ ಶಿಕ್ಷೆ ವಿಧಿಸಲಾಗಿದೆ.

ಸಂತ್ರಸ್ತ ಬಾಲಕಿ ಮೂಲತಃ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನವಳು. ಈಕೆ ಆರೋಪಿಯ ಹೆಂಡತಿಯ ಅಕ್ಕನ ಮಗಳು. ಶಾಲಾ ರಜಾದಿನವಾದ್ದರಿಂದ ಮಂಗಳೂರಿನ ಗೌರಮಠದಲ್ಲಿರುವ ತನ್ನ ಚಿಕ್ಕಮ್ಮನ ಮನೆಗೆ ಬಂದಿದ್ದಳು. ಅದೇ ದಿನ ರಾತ್ರಿ 12 ಗಂಟೆಯ ವೇಳೆಗೆ ಬಾಲಕಿಯ ಚಿಕ್ಕಪ್ಪ ಚಂದ್ರಕಾಂತ್ ಬಾಲಕಿಯ ಇಚ್ಛೆಗೆ ವಿರುದ್ಧವಾಗಿ ಅತ್ಯಾಚಾರವೆಸಗಿದ್ದ. ವಿಷಯ ಮನೆಯಲ್ಲಿದ್ದ ಚಂದ್ರಕಾಂತ್ ಪತ್ನಿ ಹಾಗೂ ಅಜ್ಜಿಯ ಗಮನಕ್ಕೂ ಬಂದಿತ್ತು. ಘಟನೆಯ ಕುರಿತಂತೆ ಆರೋಪಿಯ ಪತ್ನಿ ಮರುದಿನ ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡ ಮಹಿಳಾ ಠಾಣಾ ಎಸ್ ಕಲಾವತಿ ತನಿಖೆ ಕೈಗೆತ್ತಿಕೊಂಡಿದ್ದರು. ಅತ್ಯಾಚಾರಕ್ಕೊಳಗಾದ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು ಅತ್ಯಾಚಾರ ಎಸಗಿರುವುದು ದೃಢಪಟ್ಟಿತ್ತು.

ವೈದ್ಯಕೀಯ ವರದಿಯಲ್ಲಿ ಅತ್ಯಾಚಾರ ಸಾಬೀತುಗೊಂಡಿದ್ದರಿಂದ ಆರೋಪಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ದಂಡದ ಮೊತ್ತ 10 ಸಾವಿರ ರೂ.ದಲ್ಲಿ 9 ಸಾವಿರ ರೂ.ನ್ನು ಬಾಲಕಿಗೆ ನೀಡುವಂತೆ ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಂದೆಗೆ ಹೊಡೆಯುತ್ತಿದ್ದ ಕಳ್ಳನ ಮನಸ್ಸು ಒಂದೇ ಕ್ಷಣದಲ್ಲಿ ಬದಲಾಯಿಸಿ ಮಗಳು: ಮನಕಲಕುವ ವಿಡಿಯೋ

ರಸ್ತೆ ಗುಡಿಸುವ ಯಂತ್ರ ಖರೀದಿಸಿ 613 ಕೋಟಿ ರೂ ಗುಳುಂ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆರೋಪ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

ಹೈ ಫೈ ಇಂಗ್ಲಿಷ್, ದೊಡ್ಡ ದೊಡ್ಡ ಮಾತು: ದೆಹಲಿ ಬ್ಲಾಸ್ಟ್ ಉಗ್ರ ಉಮರ್ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments