Select Your Language

Notifications

webdunia
webdunia
webdunia
webdunia

ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ: ಆರೋಪಿಯ ಬಂಧನ

ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ: ಆರೋಪಿಯ ಬಂಧನ
ರಾಯಚೂರು , ಶುಕ್ರವಾರ, 27 ಫೆಬ್ರವರಿ 2015 (11:37 IST)
ವಿವಾಹಿತ ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಪೊಲೀಸರು ಇಂದು ಬಂಧಿಸಿದ್ದು, 16 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. 
 
ಬಂಧಿತ ಆರೋಪಿಯನ್ನು ಚೆನ್ನಪ್ಪ(28) ಎಂದು ತಿಳಿದು ಬಂದಿದ್ದು, ಜಿಲ್ಲೆಯ ಮಾನ್ವಿ ತಾಲೂಕಿನ ಕಲ್ಲೂರು ಗ್ರಾಮದ ನಿವಾಸಿ ಎಂದು ಹೇಳಲಾಗಿದೆ. ಇನ್ನು ಈ ಆರೋಪಿಯು ಬಳ್ಳಾರಿ ಜಿಲ್ಲೆಯ ಸಿಂಧನೂರು ತಾಲೂಕಿನ ತಹಶೀಲ್ದಾರ್ ಗಂಗಪ್ಪನವರ ಸಂಬಂಧಿ ಎನ್ನಲಾಗಿದೆ. 
 
ಈ ಬಂಧಿತ ಆರೋಪಿಯು ವಿವಾಹಿತ ಮಹಿಳೆಯೋರ್ವರ ಮೇಲೆ ಅತ್ಯಾಚಾರವೆಸಗಿ ತಲೆ ಮರೆಸಿಕೊಂಡಿದ್ದ ಎಂದು ಸಂತ್ರಸ್ತ ಮಹಿಳೆಯ ಕುಟುಂಬಸ್ಥರು ಆರೋಪಿಸಿದ್ದಾರೆ. ಅಲ್ಲದೆ ಆರೋಪಿ ಸಂಬಂಧಿಗಳು ದಾಖಲಾಗಿರುವ ದೂರನ್ನು ಮುಚ್ಚಿ ಹಾಕುವ ಪ್ರಯತ್ನಕ್ಕೂ ಮುಂದಾಗಿ ಪೊಲೀಸರ ಮೇಲೆ ಒತ್ತಡ ಹೇರುತ್ತಿದ್ದರು ಎಂದು ದೂರಿದ್ದಾರೆ. 
 
ತಾಲೂಕಿನ ಸಿರವಾರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ. 

Share this Story:

Follow Webdunia kannada