Publish Date: Tue, 01 Aug 2017 (19:08 IST)
Updated Date: Tue, 01 Aug 2017 (19:10 IST)
ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ ಆರೋಪಿಗೆ ನ್ಯಾಯಾಲಯ ಏಳು ವರ್ಷಗಳ ಜೈಲು ಶಿಕ್ಷೆ ಮತ್ತು 5 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.
ಕೋಲಾರದ ಎರಡನೇ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಮೂರ್ತಿ ಡಿ.ಎಸ್.ರೇಖಾ, ಆರೋಪಿ ಸುಬ್ರಮಣಿಗೆ ಏಳು ವರ್ಷಗಳ ಜೈಲು ಶಿಕ್ಷೆ ಮತ್ತು 5 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶ ಹೊರಡಿಸಿದೆ.
ಆರೋಪಿ ಸುಬ್ರಮಣಿ ಬಾಲಕಿಯನ್ನು ಬೆಂಗಳೂರಿನ ಥಣಿಸಂದ್ರಕ್ಕೆ ಕರೆದುಕೊಂಡು ಹೋಗಿ ಒತ್ತೆಯಾಳಾಗಿ ಇಟ್ಟುಕೊಂಡು ಅತ್ಯಾಚಾರವೆಸಗಿದ್ದನು.
ಕೋಲಾರ ಜಿಲ್ಲೆ ಬಂಗಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯ ವಿರುದ್ಧ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.