ಬೆಳಗಾವಿ: ಮಹಿಳೆಯ ಮೇಲೆ ಅತ್ಯಾಚಾರವೆಸಗಿ ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.
ಖಾನಾಪುರ ತಾಲೂಕಿನ ಆರೋಪಿ ಎರಡು ತಿಂಗಳ ಹಿಂದೆ ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿದ್ದ. ಆತನ ಪತ್ತೆಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದರು.
ಇದೀಗ ಕೊನೆಗೂ ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈತನ ವಿರುದ್ಧ ಅಕ್ರಮ ಗಾಂಜಾ ಸಾಗಾಟ ಪ್ರಕರಣವೂ ದಾಖಲಾಗಿದೆ.