20 ವರ್ಷದ ಯುವತಿಗೆ ಬ್ಲ್ಯಾಕ್‌ಮೇಲ್ ಮಾಡಿ ಸಾಮೂಹಿಕ ಅತ್ಯಾಚಾರ

Webdunia
ಬುಧವಾರ, 11 ಅಕ್ಟೋಬರ್ 2017 (15:13 IST)
20 ವರ್ಷದ ಯುವತಿಗೆ ಬ್ಲ್ಯಾಕ್‌ಮೇಲ್ ಮಾಡಿ ಸಾಮೂಹಿಕವಾಗಿ ಅತ್ಯಾಚಾರವೆಸಗಿದ ಹೇಯ ಘಟನೆ ಆನೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ.
20 ವರ್ಷದ ಯುವತಿಗೆ ಬ್ಲ್ಯಾಕ್‌ಮೇಲ್ ಮಾಡಿ ಬೆದರಿಸಿ ನಾಲ್ವರು ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.  
 
ನಿನ್ನ ಪ್ರಿಯಕರನೊಂದಿಗೆ ಸಲುಗೆಯಿಂದಿರುವ ವಿಡಿಯೋ ನಮ್ಮ ಬಳಿಯಿದ್ದು, ನಾವು ಹೇಳಿದಂತೆ ಕೇಳದಿದ್ದಲ್ಲಿ ವಿಡಿಯೋ ವೈರಲ್ ಮಾಡುತ್ತೇವೆ ಎಂದು ಬೆದರಿಸಿ, ಆಕೆಯನ್ನು ಅನೇಕಲ್‌ನಲ್ಲಿರುವ ಬೆಟ್ಟಕ್ಕೆ ಕರೆದುಕೊಂಡು ಸಾಮೂಹಿಕವಾಗಿ ಅತ್ಯಾಚಾರವೆಸಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಯುವತಿ ಗರ್ಭಿಣಿಯಾದ ನಂತರ ಪೋಷಕರು ಯುವತಿಯನ್ನು ವಿಚಾರಿಸಿದಾಗ ನಾಲ್ವರು ಕಾಮುಕರು ಆರು ತಿಂಗಳುಗಳಿಂದ ಅತ್ಯಾಚಾರವೆಸಗಿರುವ ಬಗ್ಗೆ ಬಾಯಿಬಿಟ್ಟಿದ್ದಾಳೆ. ಪೋಷಕರು ಆರೋಪಿಗಳ ವಿರುದ್ಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
 
ಸಾಮೂಹಿಕ ಅತ್ಯಾಚಾರ ದೂರು ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರೆಜಿಲ್ ಮಾಡೆಲ್ ನಿಂದ ವೋಟ್ ಎಂದ ರಾಹುಲ್ ಗಾಂಧಿ: ಇಟೆಲಿ ಮಹಿಳೆಯೂ ಮಾಡಿಲ್ವಾ ಎಂದ ಬಿಜೆಪಿ

ಬಿಹಾರದಲ್ಲಿ ಮೊದಲ ಹಂತದ ಮತದಾನ ಶುರು: ಪ್ರಧಾನಿ ಮೋದಿ ಮಾಡಿದ ಮನವಿಯೇನು

Karnataka Weather: ರಾಜ್ಯದಲ್ಲಿ ಇನ್ನೆಷ್ಟು ದಿನ ಮಳೆ ಇಲ್ಲಿದೆ ವಿವರ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಮುಂದಿನ ಸುದ್ದಿ
Show comments